ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಡಿ ಮೂರನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಸಂಸದ ಡಾ.ಕೆ.ಸುಧಾಕರ್ ಖಂಡಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ಜನರು ಸುರಕ್ಷಿತವಲ್ಲದ ನೀರನ್ನು ಕುಡಿಯಬೇಕೆಂದು ಬಯಸುತ್ತಿದೆಯಾ, ಸಾರ್ವಜನಿಕ ಆರೋಗ್ಯ ಸುರಕ್ಷತೆ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲವೇ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಸ್ನಿಸಿದ್ದಾರೆ. ಕೆ.ಸಿ ವ್ಯಾಲಿ ಮತ್ತು ಎಚ್.ಎನ್ ವ್ಯಾಲಿ ಯೋಜನೆಗಳಡಿಯಲ್ಲಿ ಮೂರನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ, ಕೇವಲ ಎರಡು ಹಂತದ ಶುದ್ಧೀಕರಣದ ಬಳಿಕ ಕುಡಿಯುವ ನೀರಿಗಾಗಿ ಬಳಸಬಹುದು ಎಂಬ ರಾಜ್ಯ ಸರ್ಕಾರದ ನಿಲುವು ಅತ್ಯಂತ ಕಳವಳಕಾರಿ ಮತ್ತು ಖಂಡನೀಯವಾಗಿದೆ.
ಕೆಸಿ ವ್ಯಾಲಿ ನೀರು ಕುಡಿದು ತೋರಿಸಿಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರೇ, ಮೂರನೇ ಹಂತದ ಶುದ್ಧೀಕರಣ ಇಲ್ಲದೆ ಈ ನೀರನ್ನು ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ. ಈ ನೀರನ್ನು ಮೊದಲು ಸಚಿವರೇ ಕುಡಿದು ಹಾಗೂ ತಮ್ಮ ಮನೆಗಳಲ್ಲಿ ಉಪಯೋಗಿಸಿ ತೋರಿಸಲಿ. ಹಾಗೆಯೇ ಕಾಂಗ್ರೆಸ್ ಶಾಸಕರಿಗೆ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಕುಡಿಯಲು ಕೊಡಲಿ ಎಂದು ಅವರು ಸವಾಲು ಹಾಕಿದ್ದಾರೆ.ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ ಅಥವಾ ಮೂರನೇ ಹಂತದ ಶುದ್ಧೀಕರಣ ಮಾಡಲು ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಎಂದು ಪ್ರಾಮಾಣಿಕತೆಯಿಂದ ಒಪ್ಪಿಕೊಳ್ಳಲಿ. ಅದು ಬಿಟ್ಟು ಮೂರನೇ ಹಂತದ ಶುದ್ಧೀಕರಣದ ಅಗತ್ಯವಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವುದು ಯಾವ ಸೀಮೆ ನ್ಯಾಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಯೋಗ್ಯತೆ ಇದ್ದರೆ ಶುದ್ಧೀಕರಣ ಮಾಡಿಕಾಂಗ್ರೆಸ್‌ನ ದಿವಾಳಿ ಸರ್ಕಾರದ ಪಾಪಕ್ಕೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜನತೆ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬೇಕಾ, ಪಾಪರ್ ಸರ್ಕಾರದ ಅಯೋಗ್ಯತೆಗೆ ಅಮಾಯಕ ಜನರು ಬಲಿಯಾಗಬೇಕಾ, ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ ಮೂರನೇ ಹಂತದ ಶುದ್ಧೀಕರಣ ಮಾಡಿಸಲಿ. ಇಲ್ಲವಾದರೆ 2028 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮೂರನೇ ಹಂತದ ಶುದ್ಧೀಕರಣ ಯೋಜನೆ ಜಾರಿ ಮಾಡಲಿದೆ ಎಂದು ಹೇಳಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))