ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಎರಡನೇ ದಿನವೂ ಪ್ರತಿಭಟನೆ ನಡೆಸಿತು. ಮುಂದುವರಿದ ಪ್ರತಿಭಟನಾ ಸ್ಥಳಕ್ಕೆ ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿದರು.
ಕನ್ನಡಪ್ರಭ ವಾರ್ತೆ ವಿಜಯಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಎರಡನೇ ದಿನವೂ ಪ್ರತಿಭಟನೆ ನಡೆಸಿತು. ಮುಂದುವರಿದ ಪ್ರತಿಭಟನಾ ಸ್ಥಳಕ್ಕೆ ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿದರು. ಪ್ರತಿಭಟನಾ ನಿರತ ನೌಕರರೊಂದಿಗೆ ಚರ್ಚಿಸಿ ಅವರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಈ ಕುರಿತು ಚರ್ಚಿಸಿ ಅನುಕೂಲ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು, ಸಿಬ್ಬಂದಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಸ್‌ಡಿಎಎ ಕರ ವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್, ನೀರುಘಂಟಿಗಳು, ಸ್ವಚ್ಛತಾಗಾರರು, ಗ್ರಾಪಂ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.