ರೈತ ಸಂಘಟನೆಗಳ ಮನವೊಲಿಸಿದ ಸಚಿವ ತಿಮ್ಮಾಪೂರ

| Published : Oct 18 2025, 02:02 AM IST

ಸಾರಾಂಶ

ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ನಿಗದಿತ ಬೆಲೆ ಘೋಷಿಸುವಂತೆ ಒತ್ತಾಯಿಸಿ ಶುಕ್ರವಾರ ನಗರದ ಜಿ.ಎಲ್.ಬಿ.ಸಿ ಪ್ರವಾಸಿ ಮಂದಿರದ ಅವರಣದಲ್ಲಿ ನಡೆಸುತ್ತಿದ್ದ ರೈತ ಸಂಘಟನೆಗಳ ಹೋರಾಟ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.

ಕನ್ನಡಪ್ರಭ ವಾರ್ತೆ ಮುಧೋಳ

ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಯೋಗ್ಯ ದರ ನೀಡುತ್ತಿಲ್ಲ. ಬಾಕಿ ಪಾವತಿ ವಿಳಂಬ ಧೋರಣೆ, ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೆಚ್ಚಳದಿಂದ ರೈತರಿಗಾಗುತ್ತಿರುವ ತೊಂದರೆ ಸೇರಿ ಇನ್ನಿತರ ವಿಚಾರಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ರೈತರ ಸಮಸ್ಯೆಗಳೆಲ್ಲವೂ ನನ್ನ ಸಮಸ್ಯೆಗಳಿದ್ದಂತೆ, ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು, ಕಬ್ಬಿಗೆ ನಿಗದಿತ ಬೆಲೆ ಘೋಷಣೆಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.ಸಮಸ್ಯೆಗಳ ಕುರಿತು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರ ಪರಿಹಾರ ಒದಗಿಸುತ್ತೇನೆ. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ಸಿಗುವಂತೆ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.

ಸಚಿವ ತಿಮ್ಮಾಪೂರ ಅವರು ರೈತರೊಂದಿಗೆ ನಡೆಸಿದ ಸಂವಾದ ಯಶಸ್ವಿಯಾಗಿ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ರೈತ ನಾಯಕರು ಸಚಿವರ ಭರವಸೆ ಸ್ವಾಗತಿಸಿ, ಸರ್ಕಾರದೊಂದಿಗಿನ ಸಹಭಾಗೀತ್ವಕ್ಕೆ ಒಪ್ಪಿಕೊಂಡರು.ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.