ಸಚಿವ ತಿಮ್ಮಾಪುರ ಜನ್ಮದಿನ ಅದ್ಧೂರಿ ಆಚರಣೆಗೆ ನಿರ್ಧಾರ

| Published : Sep 15 2024, 01:49 AM IST

ಸಾರಾಂಶ

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ 62ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತೋಫಿಕ್ ಪಾರ್ಥನಳ್ಳಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ 62ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತೋಫಿಕ್‌ ಪಾರ್ಥನಳ್ಳಿ ತಿಳಿಸಿದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ಜನ್ಮದಿನವನ್ನು ಸೆ.16ರಂದು ಜಮಖಂಡಿಯ ತಮ್ಮ ನಿವಾಸದಲ್ಲಿ ವಿಜೃಂಭಣೆಯಿಂದ ಆಚರಿಸಲು ಸಚಿವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಮುಖಂಡರು ನಿರ್ಣಯಿಸಿದ್ದಾರೆ. ಸುಮಾರು ಹತ್ತು ಸಾವಿರ ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಂದು ಅನಾಥಾಶ್ರಮದಲ್ಲಿ ಊಟದ ವ್ಯವಸ್ಥೆ, ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ರಕ್ತದಾನ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಮಖಂಡಿ ನಗರದ ಕಾಂಗ್ರೆಸ್ ಮುಖಂಡರು ಮತ್ತು ಅಭಿಮಾನಿಗಳು ಕಾರ್ಯಕರ್ತರು ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದ್ದು ಸಚಿವರು ಅಂದು ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ನಗರಸಭೆಯ ಅಧ್ಯಕ್ಷ ಪರಮಾನಂದ ಗೌರೋಜಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅನ್ವರ್ ಮೋಮಿನ, ಕಾಂಗ್ರೆಸ್ ಅಧ್ಯಕ್ಷ ಮಹೇಶ ಕೋಳಿ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಶಾಮರಾವ್‌ ಘಾಟಿಗೆ, ಜಕನೂರಿನ ಮದುಗೊಂಡೇಶ್ವರ ಸ್ವಾಮಿಗಳು, ಅಬುಬಕರ ಕುಡಚಿ ಸೇರಿದಂತೆ ಹಲವರು ಇದ್ದರು.