ಸಾರಾಂಶ
ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಮೀಪದ ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಮೀಪದ ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.ಘಟಪ್ರಭಾ ನದಿಯ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಚಿವರು ತಾಲೂಕಾಡಳಿಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಿದರು. ಕಾಳಜಿ ಕೇಂದ್ರ ಮತ್ತು ನಿರಾಶ್ರಿತರ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದರು.
ಸಚಿವರ ಜೊತೆಯಲ್ಲಿ ಹಾಲಿ ವಿಧಾನ ಪರಿಷತ್ ಸದಸ್ಯೆ ಮತ್ತು ಮಾಜಿ ಸಚಿವೆ ಉಮಾಶ್ರೀ ಆಗಮಿಸಿ ಸಂತ್ರಸ್ತರಿಗೆ ಸಮಾಧಾನ ಹೇಳಿ, ಯಾವುದಕ್ಕೂ ತಮಗೆ ಕೊರತೆ, ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು.ಕಾಂಗ್ರೆಸ್ ಮುಖಂಡರಾದ ಸಿದ್ದು ಕೊಣ್ಣೂರ, ಯಲ್ಲನ್ನಗೌಡ ಪಾಟೀಲ್, ಗೋವಿಂದ ಹೊಸೂರ, ಮಹಾದೇವ ಮೇಟಿ, ಪ್ರವೀಣ ಪಾಟೀಲ್, ಉದಯ ಪಡತಾರೆ, ಶಿವಾನಂದ ಉದುಪುಡಿ, ರಾಜು ಭಾಗವಾನ, ಸಂಗಪ್ಪ ಅಮಾತಿ, ಈರಪ್ಪ ಕಿತ್ತೂರ, ರಬಕವಿ ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ, ಮುಧೋಳ ತಹಸೀಲ್ದಾರ್ ವಿನೋದ್ ಹತ್ತಳ್ಳಿ, ಸರ್ಕಲ್ ಪ್ರಕಾಶ ಕುಂದರಗಿ ಮುಂತಾದವರಿದ್ದರು.