ಕನ್ನಡಪ್ರಭ ವಾರ್ತೆ ಬಾಗಲಕೋಟೆ

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಇಂದು ಮಧುರೈನಲ್ಲಿ ತಮಿಳುನಾಡು ಚುನಾವಣೆ ಉಸ್ತುವಾರಿ ಉತ್ತಮ್ ಕುಮಾರ್ ರೆಡ್ಡಿ ಹಾಗೂ ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್ ಹಾಗೂ ತಮಿಳುನಾಡು ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಸೆಲ್ವಪೆರುಂಥಗೈ ಅವರೊಂದಿಗೆ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಿದರು.

ಕಾಂಗ್ರೆಸ್, ಡಿಎಂಕೆ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಸಂಬಂಧಿಸಿದಂತೆ ಅಗತ್ಯವಿರುವ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಭಾರಿ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಮತ್ತೊಮ್ಮೆ ನಮ್ಮ ಮೈತ್ರಿಕೂಟವೇ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಸಚಿವ ಆರ್ ಬಿ ತಿಮ್ಮಾಪೂರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.