ಜು.11ಕ್ಕೆ ಚಿಕ್ಕಮಗಳೂರು- ತಿರುಪತಿ ರೈಲಿಗೆ ಸಚಿವರಿಂದ ಚಾಲನೆ

| Published : Jul 04 2025, 12:32 AM IST

ಜು.11ಕ್ಕೆ ಚಿಕ್ಕಮಗಳೂರು- ತಿರುಪತಿ ರೈಲಿಗೆ ಸಚಿವರಿಂದ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ಸಂಚರಿಸುವ ರೈಲಿಗೆ ಜು.11 ರಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ತಿರುಪತಿ, ತಿರುಪತಿಯಿಂದ ಚಿಕ್ಕಮಗಳೂರು ನಡುವೆ ಸಂಚರಿಸುವ ರೈಲಿಗೆ ಜು.11 ರಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸಂಚಾರಕ್ಕೆ ಅನುಮತಿ ದೊರಕಿಸಿಕೊಟ್ಟ ಹಿನ್ನೆಲೆಯಲ್ಲಿ ದೆಹಲಿಯ ಕಚೇರಿಯಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಮಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನರ ಪರವಾಗಿ ಗೌರವಿಸಿ, ಕೃತಜ್ಞತೆ ತಿಳಿಸಿದ್ದ ಸಂದರ್ಭದಲ್ಲಿ ರೈಲಿಗೆ ಚಾಲನೆ ನೀಡಲು ಆಗಮಿಸುವಂತೆ ಮನವಿ ಮಾಡಿಕೊಂಡಿದ್ದಕ್ಕೆ ಸಚಿವರು ಸ್ಪಂದಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಜು.11 ರಂದು ಬೆಳಗ್ಗೆ 11 ಗಂಟೆಗೆ ವಿಶೇಷ ರೈಲಿನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರು ನಿಲ್ಲಾಣಕ್ಕೆ ಆಗಮಿಸುವ ಸಚಿವರು ಚಿಕ್ಕಮಗಳೂರು ಮತ್ತು ತಿರುಪತಿ ನಡುವೆ ಸಂಚರಿಸುವ ರೈಲು ಸಂಚಾರಕ್ಕೆ ಹಸಿರುವ ನಿಶಾನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಚಿವರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ ಎಂದಿರುವ ಅವರು, ಕಾರ್ಯಕ್ರಮದ ಆನಂತರ ಸಚಿವರು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಬಳಿಕ ವಿಶೇಷ ರೈಲಿನಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.