17, 18ರಂದು ಸಚಿವ ದರ್ಶನಾಪುರ ಜಿಲ್ಲಾ ಪ್ರವಾಸ

| Published : Feb 15 2025, 12:35 AM IST

ಸಾರಾಂಶ

Minister to visit Darshanapura district on 17th and 18th

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಫೆ.17 ಮತ್ತು 18 ರಂದು ಜಿಲ್ಲಾ ಪ್ರವಾಸ ಕೈಗೊಂಡು ಅಂದು ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಫೆ.17ರಂದು ಬೆ.10:30 ಕೆಂಭಾವಿಗೆ ಆಗಮಿಸಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಸಂಜೆ 3 ಗಂಟೆಗೆ ಕಲಬುರಗಿಗೆ ಪ್ರಯಾಣ ಬೆಳೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಫೆ.18 ರಂದು ಬೆ.10 ಗಂಟೆಗೆ ಶಹಾಪುರಗೆ ಆಗಮಿಸುವರು. ಬೆ.11 ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2 ಗಂಟೆಗೆ ಶಹಾಪುರಗೆ ಆಗಮಿಸಿ, ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 5 ಗಂಟೆಗೆ ಕಲಬುರಗಿಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾಡಳಿತ ತಿಳಿಸಿದೆ.

---

14ವೈಡಿಆರ್15: ಶರಣಬಸಪ್ಪಗೌಡ ದರ್ಶನಾಪುರ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು.