ಸೋಮವಾರಪೇಟೆ ಕಾಂಗ್ರೆಸ್ ಕಚೇರಿಗೆ ಸಚಿವ ಭೇಟಿ

| Published : Apr 08 2024, 01:04 AM IST

ಸಾರಾಂಶ

ಕೊಡಗು ಈಗ ಕಾಂಗ್ರೆಸ್‌ ಭದ್ರಕೋಟೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಚಿವ ವೆಂಕಟೇಶ್‌ ಹೇಳಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಕೊಡಗು ಈಗ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್ ಮನವಿ ಮಾಡಿದರು.

ಸೋಮವಾರಪೇಟೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಐದು ಜನಪರ ಗ್ಯಾರಂಟಿಗಳು ಪ್ರತಿ ಮನೆಗೂ ತಲುಪಿದ್ದು, ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಕಾರ್ಯಕರ್ತರು ಪಕ್ಷದ ಪರವಾಗಿ ಪ್ರಚಾರ ಮಾಡುವಾಗ ದೇಶಕ್ಕಾಗಿ ಕಾಂಗ್ರೆಸ್ ಪಕ್ಷ ಕೊಟ್ಟ ಕೊಡುಗೆಗಳನ್ನು ಕುಟುಂಬದವರಿಗೆ ತಿಳಿಸಬೇಕು. ಬಿಜೆಪಿಯ ಭ್ರಷ್ಟ ಆಡಳಿತದ ಬಗ್ಗೆ ತಿಳಿಸಬೇಕು. ರೈತ, ಕಾರ್ಮಿಕ, ಬಡವರ ವಿರೋಧಿ ನೀತಿಯನ್ನು ಜನರಿಗೆ ತಲುಪಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.

ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಹೈನುಗಾರಿಕೆ ಉತ್ತೇಜನಕ್ಕೆ ಸೂಕ್ತ ಅನುದಾನ ಕಲ್ಪಿಸಬೇಕು. ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಬಿ. ಸತೀಶ್, ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ, ಡಿಸಿಸಿ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ನಗರ ಅಧ್ಯಕ್ಷ ಎಚ್.ಎ.ನಾಗರಾಜು, ಪ್ರಮುಖರಾದ ಶೀಲಾ ಡಿಸೋಜ, ಕೆ.ಎ.ಆದಂ, ಕೆ.ಎ.ಯಾಕೂಬ್, ಸುನಿಲ್, ಎಚ್.ಆರ್.ಸುರೇಶ್, ವಿ.ಎ.ಲಾರೇನ್ಸ್, ಬಿ.ಎನ್.ಬಸವರಾಜ್ ಇದ್ದರು.