ಸಾರಾಂಶ
ಸಚಿವ ಶಿವರಾಜ ತಂಗಡಗಿ ಹೇಳಿಕೆ
ಜಲಾಶಯಕ್ಕೆ ಒಳಹರಿವು ಹೆಚ್ಚಳಕನ್ನಡಪ್ರಭ ವಾರ್ತೆ ಕೊಪ್ಪಳ
ಉತ್ತಮ ಮಳೆಯಿಂದಾಗಿ ತುಂಗಾಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿರುವ ಹಿನ್ನೆಲೆ ಜು. 19ರ ಬೆಳಗ್ಗೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಸಕ್ತ ಸಾಲಿನಲ್ಲಿ ಮುಂಗಾರು- ಹಂಗಾಮಿನ ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳ ಹರಿವು ಪ್ರಾರಂಭವಾಗಿದೆ. ಜು. 18ರ ವೇಳೆಗೆ ಜಲಾಶಯದಲ್ಲಿ 46.802 ಟಿಎಂಸಿ ನೀರು ಸಂಗ್ರಹ ಇದ್ದು, ಒಳ ಹರಿವು 104060 ಕ್ಯುಸೆಕ್ಸ್ ಇದೆ.
ಇದೇ ಪ್ರಮಾಣದಲ್ಲಿ ಒಳ ಹರಿವು ಮುಂದುವರಿದಲ್ಲಿ ವಾರದಲ್ಲಿ ಜಲಾಶಯದ ಭರ್ತಿಯಾಗುವ ನಿರೀಕ್ಷೆ ಇದೆ. ಸದ್ಯಕ್ಕೆ ಒಳ ಹರಿವು ಉತ್ತಮವಾಗಿರುವ ಹಿನ್ನೆಲೆ ಸಭೆ ನಡೆಸದ ನಾಲೆಗಳಿಗೆ ನೀರು ಹರಿಸಲು ಸೂಚಿಸಲಾಗಿದ್ದು, ಶೀಘ್ರದಲ್ಲೇ ಐಸಿಸಿ ಸಭೆಗೆ ದಿನಾಂಕ ನಿಗದಿಪಡಿಸಲಾಗುವುದು. ರೈತರ ಹಿತ ದೃಷ್ಟಿಯಿಂದ ಮುಂಗಡವಾಗಿ ನೀರು ಬಿಡುಗಡೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಎಡದಂಡೆ ಮುಖ್ಯ ಕಾಲುವೆಗೆ ಜು. 19ರಿಂದ 4100 ಕ್ಯುಸೆಕ್ಸ್‌ನಂತೆ, ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆಗೆ ಜು. 19ರಿಂದ 650 ಕ್ಯುಸೆಕ್ಸ್‌ನಂತೆ, ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆಗೆ ಜು.19ರಿಂದ 1300 ಕ್ಯುಸೆಕ್ಸ್‌ನಂತೆ ಹಾಗೂ ಕಾರ್ಖಾನೆಗಳಿಗೆ 60 ಕ್ಯುಸೆಕ್ಸ್‌ನಂತೆ ನೀರು ಹರಿಸಲಾಗುವುದು. ಇನ್ನು ರಾಯಬಸವಣ್ಣ ಕಾಲುವೆಗೆ ಈಗಾಗಲೇ ಜೂ. 1ರಿಂದ 180 ಕ್ಯುಸೆಕ್ಸ್‌ನಂತೆ ನೀರು ಹರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ತುಂಗಭದ್ರಾ ಜಲಾಶಯದ ನೀರಿನ ಮಟ್ಟ
ಡ್ಯಾಂ ಸಾಮರ್ಥ್ಯ- 105.788 ಟಿಎಂಸಿಸದ್ಯದ ಸಂಗ್ರಹ - 46.802 ಟಿಎಂಸಿ
ಒಳ ಹರಿವು - 104060 ಕ್ಯೂಸೆಕ್ಹೊರ ಹರಿವು - 300 ಕ್ಯೂಸೆಕ್
ಕಳೆದ ವರ್ಷ ಇದೇ ಸಮಯಕ್ಕೆಸಂಗ್ರಹ - 10.947 ಟಿಎಂಸಿ
ಒಳ ಹರಿವು - 11425 ಕ್ಯೂಸೆಕ್ಸ್ಹೊರ ಹರಿವು - 262 ಕ್ಯೂಸೆಕ್ಸ್