ಗ್ರಾಮ ಸಹಾಯಕರ ಬೇಡಿಕೆ ಸಚಿವರ ಸ್ಪಂದನೆ

| Published : Dec 18 2023, 02:00 AM IST

ಗ್ರಾಮ ಸಹಾಯಕರ ಬೇಡಿಕೆ ಸಚಿವರ ಸ್ಪಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ನೌಕರರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದಿನೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಆದಷ್ಟು ಶೀಘ್ರವೇ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಇಂಗಳಗಿ ಹೇಳಿದರು.

ನಗರದ ಕಂದಾಯ ಇಲಾಖೆಯ ನೌಕರರ ಬ್ಯಾಂಕ್ ಆವರಣದಲ್ಲಿ ಭಾನುವಾರ ನಡೆದ ಗ್ರಾಮ ಸಹಾಯಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಚಳಿಗಾಲದ ಅಧಿವೇಶನದ ಸಮಯದಲ್ಲಿ ಸುವರ್ಣ ವಿಧಾನಸೌಧದ ಬಳಿಯ ನಡೆಸಲಾಗುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ನಮ್ಮ ಮನವಿ ಸ್ವೀಕರಿಸಿ, ಪ್ರಾಮಾಣಿಕವಾಗಿ ನಮ್ಮ ಬೇಡಿಕೆ ಸದ್ಯದಲ್ಲಿ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ರಾಜ್ಯ ಗ್ರಾಮ ಸಹಾಯಕರ ಸಂಘದ ಕಾನೂನು ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮಡಿವಾಳಪ್ಪ ವಣ್ಣೂರ ಮಾತನಾಡಿದರು. ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.