ಸಾರಾಂಶ
ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದು, ಜತೆಗೆ ತಂದೆ ರಾಮಣ್ಣ ಮತ್ತು ತಾಯಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ
ಗಂಗಾವತಿ: ನಾಲ್ಕು ವರ್ಷದ ಬಾಲಕಿ ಮೇಲೆ 15 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಸಮೀಪದ ಹಿರೇಬೆಣಕಲ್ ಹೊಸ ಗ್ರಾಮದಲ್ಲಿ ನಡೆದಿರುವದು ಬೆಳಕಿಗೆ ಬಂದಿದೆ.
ಭಾನುವಾರ ಸಂಜೆ ನಾಲ್ಕು ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ 15 ವರ್ಷದ ಇಟ್ಟಂಗಿ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸುದ್ದಿ ತಿಳಿಯುತ್ತಲೇ ಪಾಲಕರು ಬುದ್ದಿವಾದ ಹೇಳಿ ಎಚ್ಚರಿಕೆ ನೀಡಿದ್ದಾರೆ.ಗ್ರಾಮಸ್ಥರ ಮುತ್ತಿಗೆ: ಸೋಮವಾರ ಸಂಜೆ ಸುಮಾರು 200 ಕ್ಕೂ ಹೆಚ್ಚು ಜನರು ಅಪ್ರಾಪ್ತನ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಾಲಕಿ ಪಾಲಕರು ಬಾಲಕನಿಗೆ ಬುದ್ದಿವಾದ ಹೇಳಿದ್ದರು. ಈ ಕುರಿತು ಪೊಲೀಸರಿಗೆ ದೂರು ನೀಡಲು ಪಾಲಕರು ನಿರಾಕರಿಸಿದ್ದರಿಂದ ಕೆಲವರು ಪೊಲೀಸರಿಗೆ ದೂರು ನೀಡುವದಾಗಿ ತಿಳಿಸಿದ್ದರು.
ಗ್ರಾಮೀಣ ಪೊಲೀಸರು ತೆರಳಿ ಗುಂಪನ್ನು ತಿಳಿಸಿಗೊಳಿಸಿದರು. ಈ ಸಂದರ್ಭದಲ್ಲಿ ಗುಂಪು ಆರೋಪಿ ಮತ್ತು ಆತನ ಪಾಲಕರನ್ನು ಬಂಧಿಸಬೇಕೆಂದು ಆಗ್ರಹಿಸಿದರು.ಮೂವರ ಬಂಧನ:ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದು, ಜತೆಗೆ ತಂದೆ ರಾಮಣ್ಣ ಮತ್ತು ತಾಯಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಡಿವೈಎಸ್ಪಿ ಜಾಯಪ್ಪ ನ್ಯಾಮಗೌಡ ತಿಳಿಸಿದ್ದಾರೆ.
ಹೊಸ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು ಮತ್ತು ಕಾನೂನು ವಿರುದ್ಧವಾಗಿ ನಡೆದುಕೊಳ್ಳಬಾರದೆಂದು ಎಚ್ಚರಿಕೆ ನೀಡಿದರು.