ಸಾರಾಂಶ
ರೆಸಾರ್ಟ್‌ಗೆ ಕರೆದೊಯ್ದು 15 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಟಿಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ರೆಸಾರ್ಟ್‌ಗೆ ಕರೆದೊಯ್ದು 15 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಟಿಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.ನಗರದ ಸಾಕೀಬ್ ಹಾಗೂ ಓರ್ವ ಅಪ್ರಾಪ್ತ ಬಂಧಿತರು. ತಲೆಮರೆಸಿಕೊಂಡಿರುವ ಇನ್ನೊಬ್ಬ ಬಾಲಕ ಪೊಲೀಸ್ ಅಧಿಕಾರಿಯ ಪುತ್ರ ಎಂದು ಹೇಳಲಾಗುತ್ತಿದೆ.
ಘಟನೆ ವಿವರ:ಕಳೆದ 10 ದಿನಗಳ ಹಿಂದೆ ಈ ದುಷ್ಕೃತ್ಯ ನಡೆದಿದೆ. ಆರೋಪಿ ಸಾಕೀಬ್ ತನ್ನ ಹೆಸರಿನಲ್ಲಿ ರೆಸಾರ್ಟ್‌ನಲ್ಲಿ ರೂಂ ಬುಕ್ ಮಾಡಿದ್ದು, ಬಾಲಕಿಯ ಸ್ನೇಹಿತನೇ ಆಕೆಯನ್ನು ಫುಸಲಾಯಿಸಿ ರೆಸಾರ್ಟ್‌ಗೆ ಕರೆದುಕೊಂಡು ಹೋಗಿದ್ದ. ಬಾಲಕಿ ಮನೆಗೆ ಮರಳಿ ಬಂದಾಗ ಹೊಟ್ಟೆ ನೋವಿನಿಂದ ಬಳಲಿದ್ದು, ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಅತ್ಯಾಚಾರ ಆಗಿರುವ ವಿಷಯ ಬೆಳಕಿಗೆ ಬಂದಿದೆ. ಟಿಳಕವಾಡಿ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ತಿಳಿಸಿದ್ದಾರೆ.