ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕಾರಣ: ಬಿ.ವೈ.ವಿಜಯೇಂದ್ರ

| Published : Apr 29 2024, 01:39 AM IST / Updated: Apr 29 2024, 10:23 AM IST

ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕಾರಣ: ಬಿ.ವೈ.ವಿಜಯೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.

ಹೊಸಪೇಟೆ: ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಪರಿಣಾಮ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ನಗರದ ಡಾ.ಪುನೀತ್ ರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಎಂಬ ಹಿಂದೂ ಯುವತಿ ಬರ್ಬರ ಹತ್ಯೆಯಾಗಿದ್ದರೂ ಖಂಡನೆ ಮಾಡಲಿಲ್ಲ. ಮಾರುಕಟ್ಟೆ, ದೇವಸ್ಥಾನಕ್ಕೆ ಹೋದ ಮಗಳು ಸುರಕ್ಷಿತವಾಗಿ ಮನೆಗೆ ಬರುವುದು ಅನುಮಾನವಾಗಿದೆ ಎಂದರು.

ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಅನೇಕ ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳಿಂದ ಈಡೇರಿಸಲು ಆಗುತ್ತಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಭೀಕರ ಬರದಲ್ಲಿ ರೈತರಿಗೆ ಬರ ಪರಿಹಾರ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ₹3454 ಕೋಟಿ ಬಿಡುಗಡೆ ಮಾಡಿದೆ. ಬಿಎಸ್‌ವೈ ಸಿಎಂ ಇದ್ದಾಗ ಪ್ರವಾಹ ಇದ್ದರೂ ರೈತರಿಗೆ ಸಹಕಾರ ನೀಡಿ ಬೆಂಬಲವಾಗಿದ್ದರು. ಆದರೆ, ಈಗ ಅಭಿವೃದ್ಧಿ ಸಂಪೂರ್ಣವಾಗಿ ನಿಂತು ಬಿಟ್ಟಿದೆ. ದೇಶದ ಭವಿಷ್ಯ ರೂಪಿಸುವ ಚುನಾವಣೆಯನ್ನು ಎಲ್ಲ ಕಾರ್ಯಕರ್ತರು ಗಂಭೀರವಾಗಿ ಕೆಲಸ ಮಾಡಬೇಕು. ಬಿಜೆಪಿ-ಜೆಡಿಎಸ್ ಒಟ್ಟಾಗಿ ಗೆಲುವು ಸಾಧಿಸಬೇಕು ಎಂದರು.

ಕಟುಕ ಸರ್ಕಾರ: ಕುಮಾರಸ್ವಾಮಿಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಬರೀ ಖಾಲಿ ಚೊಂಬು ಪ್ರದರ್ಶನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರದಿಂದ ಮೇವು, ಕುಡಿವ ನೀರಿಲ್ಲ. ಆದರೂ ರೈತರ ಬಗ್ಗೆ ಅನುಕಂಪ ಇಲ್ಲದ ಕಟುಕ ಸರ್ಕಾರ ರಾಜ್ಯದಲ್ಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.ಉಪಸಮಿತಿ ತೀರ್ಮಾನದಂತೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ 10 ವರ್ಷಗಳಲ್ಲಿ ರಾಜ್ಯದಿಂದ ಕೇಳಿದ ₹19 ಸಾವಿರ ಕೋಟಿಯಲ್ಲಿ ಕೇವಲ ಒಂದೂವರೆ ಸಾವಿರ ಕೋಟಿ ರು. ಕೊಟ್ಟಿದ್ದರು. ಮೋದಿ ಕಳೆದ ಎಂಟು ವರ್ಷದಲ್ಲಿ ₹18 ಸಾವಿರ ಕೋಟಿಯಲ್ಲಿ ₹7 ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದರೂ ಕಾಂಗ್ರೆಸ್ ಸಣ್ಣತನದ ರಾಜಕಾರಣ ಮಾಡುತ್ತಿದೆ. ಮೋದಿ ವರ್ಚಸ್ಸಿನಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.