ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸಿ.ಎ. ಜುನೈದ್ ನೇಮಕ

| Published : Aug 18 2024, 01:53 AM IST

ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸಿ.ಎ. ಜುನೈದ್ ನೇಮಕ
Share this Article
  • FB
  • TW
  • Linkdin
  • Email

ಸಾರಾಂಶ

ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಸಿ. ಎ. ಜುನೈದ್‌ ನೇಮಕಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಸಿ.ಎ. ಜುನೈದ್ ನೇಮಕಗೊಂಡಿದ್ದಾರೆ.

ಈ ಕುರಿತು ನೇಮಕಾತಿ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಪಿ. ಎ. ಹನೀಫ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನದ ಮೇರೆಗೆ, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಮತ್ತು ಡಿಸಿಸಿ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಖಾಲಿ ಇದ್ದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಿ. ಎ. ಜುನೈದ್ ಅವರನ್ನು ನೇಮಕಗೊಳಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷ ಸಂಘಟನೆಗಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸೇವಾದಳ ವಿಭಾಗದಲ್ಲೂ ಈ ಹಿಂದೆ ಕಾರ್ಯನಿರ್ವಹಿಸಿದ್ದ ಸಿ. ಎ. ಜುನೈದ್ ಅವರಿಗೆ ನೂತನ ಅಧ್ಯಕ್ಷ ಸ್ಥಾನದ ನೇಮಕಾತಿ ಆದೇಶ ಪತ್ರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ. ಎಸ್. ಪೊನ್ನಣ್ಣ ಹಸ್ತಾಂತರಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಪಿ.ಎ. ಹನೀಫ್, ಉಪಾಧ್ಯಕ್ಷರಾದ ಎಂ. ಎಂ. ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಕೆ. ಎಂ. ಸಯ್ಯದ್ ಭಾವ, ಕಾರ್ಯಕಾರಿ ಸಮಿತಿ ಸದಸ್ಯರಾದ ಮೊಹಮ್ಮದಾಲಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣಿರ ಹರೀಶ್, ಉಪಾಧ್ಯಕ್ಷರಾದ ಆಲೀರ ಎಂ. ರಶೀದ್, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕೋಳೆರ ಭಾರತಿ ಮೊದಲಾದವರು ಉಪಸ್ಥಿತರಿದ್ದರು.