ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಕೋಟೆ ರಸ್ತೆಯ ಲಕ್ಷ್ಮಿನರಸಿಂಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಲಕ್ಷಾಂತರ ರು. ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೆಲ ನಿರ್ದೇಶಕರು ಹಾಗೂ ಸದಸ್ಯರು ಸಂಘದ ಕಚೇರಿಗೆ ಮುತ್ತಿಗೆ ಹಾಕಿ ಕಾರ್ಯದರ್ಶಿ ಅವರಿಂದ ವಸೂಲಿ ಮಾಡಿ ಸಂಘಕ್ಕೆ ಆಗಿರುವ ನಷ್ಟ ಸರಿಪಡಿಸಬೇಕೆಂದು ಒತ್ತಾಯಿಸಿದರು.ತಾಲೂಕಿನ ಕಂಸಾಗರದ ಕೆ.ಟಿ.ಕುಮಾರ್ ಅವರು ಸಂಘದ ವ್ಯಾಪ್ತಿಯಲ್ಲಿ ಇಲ್ಲದಿದ್ದರೂ ಅವರ ಹೆಸರಿನಲ್ಲಿ 1.8 ಲಕ್ಷ ರು. ಮಂಜೂರು ಮಾಡಲಾಗಿದೆ. ಹಲವು ವರ್ಷಗಳ ಹಿಂದೆ ಸತ್ತಿರುವ ವ್ಯಕ್ತಿ ಹೆಸರಿನಲ್ಲೂ ನಕಲಿ ದಾಖಲಾತಿ ಸಿದ್ಧಪಡಿಸಿ ಸಾಲ ನೀಡಲಾಗಿದೆ. ಕೆಲವು ಸದಸ್ಯರಿಗೆ ಹೆಚ್ಚುವರಿ ಸಾಲ ಮಂಜೂರು ಮಾಡಿಕೊಂಡು ಚೆಕ್ ಮೂಲಕ ಹಣ ಡ್ರಾ ಮಾಡಿ ಬಳಸಿಕೊಂಡಿದ್ದಾರೆಂದು ದೂರಿದರು.ಅಧ್ಯಕ್ಷ ಎಂ.ವಿ.ಮಾಯಣ್ಣ ಮಾತನಾಡಿ, ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೇಮ್ ಕುಮಾರಿ ಅವರು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೂ ಸಮರ್ಪಕ ಉತ್ತರ ಕೊಡುತ್ತಿಲ್ಲ. ತಪ್ಪು ಒಪ್ಪಿಕೊಂಡು ಸ್ವಲ್ಪ ಹಣವನ್ನು ಮರು ಪಾವತಿ ಮಾಡಿದ್ದಾರೆ. ಜು.24ರಂದು ಸಭೆ ನಡೆಸಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.
ಸಿಇಒ ಪ್ರೇಮ್ ಕುಮಾರಿ ಮಾತನಾಡಿ, ರೈತರಿಗೆ ಸಂಘದಿಂದ ನೀಡಬೇಕಿದ್ದ ಸೌಲಭ್ಯ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಗಿರುವ ಲೋಪದೋಷ ಸರಿಪಡಿಸಿಕೊಳ್ಳಲಾಗುವುದೆಂದು ಹೇಳಿದರು.ಈ ವೇಳೆ ನಿರ್ದೇಶಕರು ಸದಸ್ಯರು ಇದ್ದರು.
ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಅಗತ್ಯ: ಬಿಇಒ ಯೋಗೇಶ್ದೇವಲಾಪುರ:ಕ್ರೀಡೆ ಮಕ್ಕಳಿಗೆ ಕೇವಲ ಆಟವಾಗದೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ತಿಳಿಸಿದರು.
ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ ವೃತ್ತದ ಕೆಪಿಎಸ್ ಶಾಲೆ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಸನ, ದೈಹಿಕ ಹಾಗೂ ಸಾಂಸ್ಕೃತಿಕ ಬೆಸುಗೆಯಾಗಿ ಬೆಳೆಯಲು ಕ್ರೀಡೆಯಿಂದ ಮಾತ್ರ ಸಾಧ್ಯ ಎಂದರು.ಶಾಲಾ ಅವಧಿಯಲ್ಲಿ ವ್ಯಾಸಂಗದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿದರೆ ತಮ್ಮ ಸೂಕ್ತ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗಲಿದೆ. ಸ್ಪರ್ಧೆಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವಂತೆ ಸಲಹೆ ನೀಡಿದರು.ಸಮಾರಂಭದಲ್ಲಿ ಶಾಲಾ ಸಮಿತಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರೇಶ್, ಕಾರ್ಯದರ್ಶಿ ಮಂಜೇಗೌಡ, ಶಿಕ್ಷಣ ಸಂಯೋಜಕರಾದ ಡಿ.ಪಿ.ಗಿರೀಶ್. ಸಿದ್ದೇಶ್, ಸಮಾರಂಭದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಮ್ಮ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಿವಸ್ವಾಮಿ, ಉಗ್ರೇಗೌಡ, ದೈಹಿಕ ಶಿಕ್ಷಣ ಪರೀಕ್ಷಕರಾದ ಸುರೇಶ್, ಮುಖ್ಯ ಶಿಕ್ಷಕರಾದ ನಾಗೇಗೌಡ ಹಾಜರಿದ್ದರು.