ನಾಪತ್ತೆಯಾಗಿದ್ದ ಆಟೋ ಚಾಲಕ ಮೃತದೇಹ ಗಡಿನಾಡು ಕೇರಳದ ಬಾವಿಯಲ್ಲಿ ಪತ್ತೆ

| Published : Apr 12 2025, 12:45 AM IST

ನಾಪತ್ತೆಯಾಗಿದ್ದ ಆಟೋ ಚಾಲಕ ಮೃತದೇಹ ಗಡಿನಾಡು ಕೇರಳದ ಬಾವಿಯಲ್ಲಿ ಪತ್ತೆ
Share this Article
  • FB
  • TW
  • Linkdin
  • Email

ಸಾರಾಂಶ

ದ ನಾಪತ್ತೆಯಾಗಿದ್ದ ಇಲ್ಲಿನ ಕೊಲ್ನಾಡ್‌ ನಿವಾಸಿ ಚಾಲಕ ಮುಹಮ್ಮದ್ ಶರೀಫ್ (52) ಮೃತದೇಹ ಗುರುವಾರ ಕರ್ನಾಟಕ-ಕೇರಳದ ಗಡಿ ಪ್ರದೇಶ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಇಲ್ಲಿನ ಕೊಲ್ನಾಡ್‌ ನಿವಾಸಿ ಚಾಲಕ ಮುಹಮ್ಮದ್ ಶರೀಫ್ (52) ಮೃತದೇಹ ಗುರುವಾರ ಕರ್ನಾಟಕ-ಕೇರಳದ ಗಡಿ ಪ್ರದೇಶ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ.

ಮುಹಮ್ಮದ್ ಶರೀಫ್ ತನ್ನ ರಿಕ್ಷಾವನ್ನು ನಗರದ ಕೊಟ್ಟಾರ ಚೌಕಿಯಲ್ಲಿ ಪಾರ್ಕಿಂಗ್ ಮಾಡುತ್ತಿದ್ದು, ಬುಧವಾರ ಎಂದಿನಂತೆ ತನ್ನ ಮನೆಯಿಂದ ಕೊಟ್ಟಾರ ಚೌಕಿಗೆ ಬಂದಿದ್ದರು. ಆದರೆ ವಾಪಸ್ ಮನೆಗೆ ಬಾರದ ಕಾರಣ ಮತ್ತು ಮೊಬೈಲ್ ಕೂಡ ಸಂಪರ್ಕಕ್ಕೆ ಸಿಗದ ಕಾರಣ ಮನೆ ಮಂದಿ ಆತಂಕಗೊಂಡಿದ್ದರು. ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಕಾಣೆಯಾಗಿರುವ ಬಗ್ಗೆ ಸಂದೇಶ ರವಾನಿಸಲಾಗಿತ್ತು.

ಗುರುವಾರ ರಾತ್ರಿಯ ವೇಳೆಗೆ ಮೃತದೇಹವು ಕರ್ನಾಟಕ-ಕೇರಳ ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿನ ಬಾವಿಯಲ್ಲಿ ಪತ್ತೆಯಾಗಿದೆ. ಪಕ್ಕದಲ್ಲೇ ರಿಕ್ಷಾ ಕೂಡ ಇದೆ. ಬಾವಿಯ ಬಳಿ ರಕ್ತದ ಕಲೆಗಳು ಕಂಡು ಬಂದಿದ್ದು ಮಾದಕ ವ್ಯಸನಿಗಳು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿರುವ ಮುಹಮ್ಮದ್ ಶರೀಫ್ ದಿನಾ ಬೆಳಗ್ಗೆ 10 ಗಂಟೆಗೆ ತನ್ನ ಮನೆಯಿಂದ ಕೊಟ್ಟಾರ ಚೌಕಿಗೆ ಬಂದು ಬಾಡಿಗೆಗೆ ರಿಕ್ಷಾ ಓಡಿಸುತ್ತಾರೆ. ತಡರಾತ್ರಿಯಾದರೂ ಸರಿ, ಮನೆಗೆ ಮರಳುತ್ತಾರೆ. ಆದರೆ ಬುಧವಾರ ಬೆಳಗ್ಗೆ ಮನೆಯಿಂದ ಹೊರಟು ಮಂಗಳೂರಿಗೆ ಬಂದಿದ್ದ ಮುಹಮ್ಮದ್ ಶರೀಫ್ ಗುರುವಾರ ತಡರಾತ್ರಿಯವರೆಗೂ ಮನೆಗೆ ಮರಳಲಿಲ್ಲ ಎನ್ನಲಾಗಿದೆ. ಹಾಗಾಗಿ ಹುಡುಕಾಟ ನಡೆಸಲಾಯಿತು. ಮುಸ್ಸಂಜೆಯ ವೇಳೆಗೆ ಕೇರಳ ಗಡಿ ಭಾಗದ ತಲಪಾಡಿ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ಬಾವಿಯಲ್ಲಿ ಮುಹಮ್ಮದ್ ಶರೀಫರ ಮೃತದೇಹವಿರುವ ಬಗ್ಗೆ ಮಾಹಿತಿ ಬಂದಿದೆ.