ಮಹಿಳೆಯರ ಸಬಲೀಕರಣ ಜ್ಞಾನವಿಕಾಸ ಕೇಂದ್ರದ ಉದ್ದೇಶ: ಶೇಖರ್‌ ಶೆಟ್ಟಿ

| Published : Feb 14 2024, 02:21 AM IST

ಮಹಿಳೆಯರ ಸಬಲೀಕರಣ ಜ್ಞಾನವಿಕಾಸ ಕೇಂದ್ರದ ಉದ್ದೇಶ: ಶೇಖರ್‌ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಸಿಂಧನೂರಿನ ಏಳುರಾಗಿ ಕ್ಯಾಂಪಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸೃಜನಶೀಲ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ 20 ಲೀಟರ್‌ನ ವಾಟರ್ ಕ್ಯಾನ್‌ಗಳನ್ನು ವಿತರಿಸಲಾಯಿತು.

ಸಿಂಧನೂರು: ಮಹಿಳೆಯರನ್ನು ಬೌದ್ಧಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ ಜ್ಞಾನವಿಕಾಸ ಕೇಂದ್ರಗಳನ್ನು 32 ವರ್ಷಗಳಿಂದ ಪ್ರಾರಂಭಿಸುತ್ತಾ ಬರಲಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿಂಧನೂರು ತಾಲೂಕು ಯೋಜನಾಧಿಕಾರಿ ಶೇಖರ್ ಶೆಟ್ಟಿ ಹೇಳಿದರು.

ನಗರದ ಏಳುರಾಗಿ ಕ್ಯಾಂಪಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸೃಜನಶೀಲ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಒಟ್ಟು 3343 ಸ್ವಸಹಾಯ ಸಂಘಗಳಿವೆ. ಇವುಗಳಲ್ಲಿ ಕೆಲವನ್ನು ಗ್ರಾಮಗಳಲ್ಲಿ ಜ್ಞಾನವಿಕಾಸ ಕೇಂದ್ರಗಳನ್ನು ಆರಂಭಿಸಿ ಸ್ವಚ್ಛತೆ, ಶಿಕ್ಷಣ, ಸ್ವಯಂ ಉದ್ಯೋಗ ಕುರಿತು ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಮಹಿಳೆಯರು ಪಡೆಯಬೇಕು ಎಂದರು.

ಏಳುರಾಗಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಜೇಂದ್ರಕುಮಾರ ಹಾಗೂ ಸಹಶಿಕ್ಷಕಿ ಜಲಜ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಕನಕಪ್ಪ ಸೇರಿದಂತೆ ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಸಮನ್ವಯಾಧಿಕಾರಿಗಳು ಹಾಗೂ ಕೇಂದ್ರದ ಸದಸ್ಯರು ಇದ್ದರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ 20 ಲೀಟರ್ನ ವಾಟರ್ ಕ್ಯಾನ್ಗಳನ್ನು ವಿತರಿಸಲಾಯಿತು.