ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯ ಸೃಷ್ಟಿಸಲಾಗುತ್ತಿದೆ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಇಂತಹ ಪಿತೂರಿಗಳನ್ನು ಎದುರಿಸುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷಕ್ಕೆ ಮತ್ತು 136 ಶಾಸಕರನ್ನು ಆಯ್ಕೆ ಮಾಡಿದ ಜನತೆಗೆ ಇದೆ ಹೇಳಿದರು.
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ನೀಡದಂತೆ ರಾಜ್ಯದ ಜನರು ಹಾಗೂ ನಾವುಗಳು ಅವರನ್ನು ಬಿಡುವುದಿಲ್ಲ. ಈಗಾಗಲೇ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಹೊರಬೀಳುವ ಮುನ್ನವೇ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಚಿವ ತಿಮ್ಮಾಪೂರ ಆರೋಪಿಸಿದರು.ಇತರೆ ರಾಜ್ಯಗಳಲ್ಲಿ ಇದೇ ರೀತಿಯ ಅಧಿಕಾರ ದುರುಪಯೋಗದ ಉದಾಹರಣೆಗಳನ್ನು ಉಲ್ಲೇಖಿಸಿ ಇಡಿ, ಐಟಿ ಮತ್ತು ರಾಜಭವನ ಬಿಜೆಪಿಯೇತರ ರಾಜ್ಯಸರ್ಕಾರಗಳನ್ನು ಗುರಿಯಾಗಿಸಿಕೊಂಡಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರವನ್ನು ಸಾರಾಸಗಟಾಗಿ ತಿಮ್ಮಾಪುರ ತಿರಸ್ಕರಿಸಿದರು.
----ಬಾಕ್ಸ್
ರಾಜ್ಯಪಾಲರ ನಡೆ ಅಸಂವಿಧಾನಿಕಬಾಗಲಕೋಟೆ:
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವ ಮಟ್ಟಕ್ಕೆ ಇಳಿದಿದ್ದು ನಿಜಕ್ಕೂ ಅಸಂವಿಧಾನಿಕವಾದ ಕ್ರಮವಾಗಿದೆ ಎಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ ತಿಳಿಸಿದ್ದಾರೆ.ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದೆ. ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.
---ಸರ್ಕಾರ ಇಕ್ಕಟ್ಟಿಗೆ ಸಿಲುಕಿಸುವ ತಂತ್ರಲೋಕಾಪುರ:
ರಾಜ್ಯ ಕಂಡ ಅತ್ಯಂತ ಜನಪ್ರಿಯ ಹಾಗೂ ದೇಶದ ಶ್ರೇಷ್ಠ ಅಹಿಂದ ನೇತಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿ ಜನಪರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೇಸ್ ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಾಲಗಿ ಖಂಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರ ನಡೆ ತೀವ್ರ ಖಂಡನೀಯ ಎಂದಿದ್ದಾರೆ.೧೭-ಎಲ್.ಕೆ.ಪಿ-೧ : ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿ ಲಕ್ಷö್ಮಣ ಮಾಲಗಿ ಭಾವಚಿತ್ರ.