ಮಿಥುನ್‌ ರೈ ಜನ್ಮದಿನ: ಕಿನ್ನಿಗೋಳಿಯಲ್ಲಿ ರಕ್ತದಾನ ಶಿಬಿರ

| Published : Oct 05 2025, 01:01 AM IST

ಸಾರಾಂಶ

ಮೂಲ್ಕಿ-ಮೂಡಬಿದಿರೆ ಯುವ ಕಾಂಗ್ರೆಸ್ ಸಮಿತಿ ಹಾಗೂ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರ ಜನ್ಮದಿನದ ಪ್ರಯುಕ್ತ ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆ ಹಾಗೂ ಮಂಗಳೂರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕಿನ್ನಿಗೋಳಿಯ ಕಾನ್ಸೆಟ್ಟಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಕಾರ್ಯಕರ್ತರು ಪಕ್ಷದ ಜೀವಾಳ. ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ ಹೇಳಿದರು.

ಮೂಲ್ಕಿ-ಮೂಡಬಿದಿರೆ ಯುವ ಕಾಂಗ್ರೆಸ್ ಸಮಿತಿ ಹಾಗೂ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರ ಜನ್ಮದಿನದ ಪ್ರಯುಕ್ತ ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆ ಹಾಗೂ ಮಂಗಳೂರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕಿನ್ನಿಗೋಳಿಯ ಕಾನ್ಸೆಟ್ಟಾ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರ ಮತ್ತು ಅಶಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನವಾಜ್, ಮೂಲ್ಕಿ ನಗರ ಪಂಚಾಯಿತಿ ಸದಸ್ಯರಾದ ಪುತ್ತು ಬಾವ, ಮಂಜುನಾಥ್ ಕಂಬಾರ್, ಯೋಗೀಶ್ ಕೋಟ್ಯಾನ್, ಮೂಲ್ಕಿ- ಮೂಡುಬಿದಿರೆ ಯುವ ಕಾಂಗ್ರೆಸ್ ಅಧ್ಯಕ್ಷ ಜಾಕ್ಸನ್ ಪಕ್ಷಿಕೆರೆ, ರೆಡ್ ಕ್ರಾಸ್ ಸಂಯೋಜಕ ಪ್ರವೀಣ್ ಕುಮಾರ್, ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆಯ ಮುಖ್ಯಸ್ಥರಾದ ಸಿಸ್ಟರ್ ರೆನಿಷಾ, ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಡಿಕೋಸ್ತಾ, ಕಾಂಗ್ರೆಸ್ ನಾಯಕರಾದ ಟಿ.ಎಚ್. ಮೈಯದ್ದಿ, ಅಶ್ವಿನ್ ಆಳ್ವ ಪಕ್ಷಿಕೆರೆ, ನವೀನ್ ಸಾಲ್ಯಾನ್ ಪಂಜ, ಜನಾರ್ದನ್ ಕೆ.ಎಸ್. ರಾವ್ ನಗರ, ಅಶೋಕ್ ಪೂಜಾರ ಮತ್ತಿತರರು ಉಪಸ್ಥಿತರಿದ್ದರು.

ಪ್ರಕಾಶ್ ಆಚಾರ್ಯ ಸ್ವಾಗತಿಸಿ, ವಂದಿಸಿದರು.