ಕೇಂದ್ರ ಸಚಿವ ಎಚ್ಡಿಕೆಗೆ ಮೈತ್ರಿ ಕಾರ್ಯಕರ್ತರ ಅಭಿನಂದನೆ

| Published : Jun 18 2024, 12:53 AM IST

ಸಾರಾಂಶ

ದಾಬಸ್‌ಪೇಟೆ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾಬಸ್‌ಪೇಟೆ ಪಟ್ಟಣದ ಮೂಲಕ ಸಿದ್ದಗಂಗಾ ಮಠಕ್ಕೆ ತೆರಳುವ ವೇಳೆ ಪಟ್ಟಣದ ಉದ್ದಾನೇಶ್ವರ ವೃತ್ತದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿ ಪಟಾಕಿ ಹಚ್ಚಿ, ಸಿಹಿ ತಿನ್ನಿಸಿ ಅಭಿನಂದಿಸಿ ಬೀಳ್ಕೊಟ್ಟರು.

ದಾಬಸ್‌ಪೇಟೆ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾಬಸ್‌ಪೇಟೆ ಪಟ್ಟಣದ ಮೂಲಕ ಸಿದ್ದಗಂಗಾ ಮಠಕ್ಕೆ ತೆರಳುವ ವೇಳೆ ಪಟ್ಟಣದ ಉದ್ದಾನೇಶ್ವರ ವೃತ್ತದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿ ಪಟಾಕಿ ಹಚ್ಚಿ, ಸಿಹಿ ತಿನ್ನಿಸಿ ಅಭಿನಂದಿಸಿ ಬೀಳ್ಕೊಟ್ಟರು.

ನಂತರ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮಾಧ್ಯಮಗಳೊಂದಿಗೆ ಮಾತನಾಡಿ, ದಾಬಸ್‌ಪೇಟೆ ಭಾಗದ ಸೋಂಪುರ ಕೈಗಾರಿಕಾ ಪ್ರದೇಶ, ಏಷ್ಯಾದ ಪ್ರತಿಷ್ಠಿತ ದೊಡ್ಡ ಕೈಗಾರಿಕಾ ಪ್ರದೇಶವಾಗಿದೆ, ಈ ಕೈಗಾರಿಕಾ ಪ್ರದೇಶಕ್ಕೆ ಬೇಕಾದ ಮೂಲಭೂತ ಸೌಲಭ್ಯ, ಸ್ಥಳೀಯರಿಗೆ ಉದ್ಯೋಗ ಅವಕಾಶ, ನೀರಾವರಿ ಸೌಲಭ್ಯದ ಬಗ್ಗೆ ಕೇಂದ್ರ ಸಚಿವರಿಗೆ ತಿಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟೂ ಯೋಜನೆ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದರು.

ಜೆಡಿಎಸ್ ಹೋಬಳಿ ಅಧ್ಯಕ್ಷ ಭಾರತೀಪುರ ಮೋಹನ್ ಕುಮಾರ್ ಮಾತನಾಡಿ, ಕುಮಾರಸ್ವಾಮಿಯವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗ ಸಾಕಷ್ಟು ಜನಪರ ಕೆಲಸ ಕೈಗೊಂಡಿದ್ದರು. ಲಾಟರಿ ನಿಷೇಧ, ಸೈಕಲ್ ವಿತರಣೆ ಇತರ ಜನಪರ ಯೋಜನೆಗಳನ್ನು ಕೈಗೊಂಡಿದ್ದರು. ಇದೇ ಹಾದಿಯಲ್ಲೇ ಇದೀಗ ಬೃಹತ್ ಕೈಗಾರಿಕಾ ಸಚಿವರಾಗಿ ನಮ್ಮ ಭಾಗಕ್ಕೆ ಹೆಚ್ಚು ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.

ಸೆಲ್ಫಿಗಾಗಿ ಮುಗಿಬಿದ್ದ ಕಾರ್ಯಕರ್ತರು:

ಪಟ್ಟಣಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಜೊತೆ ಮೊಬೈಲ್ ನಲ್ಲಿ ಸೆಲ್ಪಿಗಾಗಿ ಜೆಡಿಎಸ್ ಕಾರ್ಯಕರ್ತರು ಮುಗಿಬಿದ್ದ ದೃಶ್ಯ ಕಂಡು ಬಂತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಎನ್‌ಡಿಎ ಮುಖಂಡ ಹಾಗೂ ಎಪಿಎಂಸಿ ಮಾಜಿ ನಿರ್ದೇಶಕ ಗಂಗಣ್ಣ, ಹೋಬಳಿ ಅಧ್ಯಕ್ಷ ಮುರಳೀಧರ್, ಶಿವಗಂಗೆ ಗ್ರಾಪಂ ಅಧ್ಯಕ್ಷ ಪ್ರಭುದೇವ್, ಟಿಎಪಿಎಂಸಿ ಮಾಜಿ ಅಧ್ಯಕ್ಷ ಜಗಜ್ಯೋತಿ ಬಸವೇಶ್ವರ, ಜೆಡಿಎಸ್ ಹೋಬಳಿ ಯುವ ಘಟಕದ ಅಧ್ಯಕ್ಷ ವೀರಸಾಗರ ಕರವೇ ಮಂಜುನಾಥ್, ಗ್ರಾಪಂ ಉಪಾಧ್ಯಕ್ಷ ರಾಜೇಶ್ ಕುಮಾರ್, ಅಲ್ಪಯ್ಯನಪಾಳ್ಯ ವಿಎಸ್‌ಎಸ್‌ಎನ್‌ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ಪುಟ್ಟಗಂಗಯ್ಯ, ಬಿ.ಎಂ.ಶ್ರೀನಿವಾಸ್, ಬಿ.ಪಿ.ಶ್ರೀನಿವಾಸ್, ತ್ಯಾಮಗೊಂಡ್ಲು ಟಿ.ಆರ್.ರಾಜು, ಬೈರೇಗೌಡ, ನಿರ್ಮಾಪಕ ನಾಗರಾಜು, ಮಹಿಳಾ ಮುಖಂಡರಾದ ವೇದಾವತಿ ಮಂಗಳಮ್ಮ, ಗುಡೇಮಾರನಹಳ್ಳಿ ನಾಗರಾಜು, ಎಡೇಹಳ್ಳಿ ಹರ್ಷ ಇತರರಿದ್ದರು.ಪೋಟೋ 1 :

ದಾಬಸ್‌ಪೇಟೆಯ ಉದ್ದಾನೇಶ್ವರ ವೃತ್ತದಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.