ಪಾಂಡವಪುರ ಪಟ್ಟಣದಲ್ಲಿ ಶಾಲಾ-ಕಾಲೇಜುಗಳನ್ನು ರಜೆ ನೀಡಿ ಕರ್ನಾಟಕ ಬಂದ್‌ಗೆ ಸಹಕಾರ ನೀಡುವಂತೆ ರೈತಸಂಘದ ಕಾರ್ಯಕರ್ತರು ಕರೆ ನೀಡಿದ ಹಿನ್ನೆಲೆಯಲ್ಲಿ ಪಟ್ಟಣವು ಶಾಲೆಗಳಿಗೆ ರಜೆ ನೀಡಿದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ.
ಪಾಂಡವಪುರ:
ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಪಟ್ಟಣದಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.ಬಂದ್‌ಗೆ ಬೆಂಬಲಿಸಿ ರೈತಸಂಘ ಹಾಗೂ ವಿದ್ಯಾರ್ಥಿಗಳು ರಸ್ತೆಗಿಳಿದು ಹೋರಾಟ ನಡೆಸಿದ್ದು, ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ ದಿನಬಳಕೆ ವಸ್ತುಗಳ ಅಂಗಡಿ, ಮೆಡಿಕಲ್, ಆಸ್ಪತ್ರೆಗಳನ್ನು ಹೊರತುಪಡಿಸಿ ಕೆಲವು ಅಂಗಡಿ-ಮುಂಗಟ್ಟುಗಳು ಮಾತ್ರ ಬಾಗಿಲು ಮುಚ್ಚಿದ್ದವು.
ಸಾರಿಗೆ ಬಸ್, ಆಟೋಗಳು, ಗೂಡ್ಸ್‌ಗಾಡಿಗಳು ಎಂದಿನಂತೆ ಸಂಚಾರಿಸಿದವು. ಬಳಿಕ ರೈತಸಂಘದ ಕಾರ್ಯಕರ್ತರು ಬೈಕ್‌ಗಳ ಮೂಲಕ ಪಟ್ಟಣದಲ್ಲಿ ಸಂಚರಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚುವಂತೆ ಮನವಿ ಮಾಡಿದರು. ಆ ಬಳಿಕ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಸಹಕಾರ ನೀಡಿದರು.ರಸ್ತೆಗಿಳಿದ ವಿದ್ಯಾರ್ಥಿಗಳು:
ಪಟ್ಟಣದಲ್ಲಿ ಶಾಲಾ-ಕಾಲೇಜುಗಳನ್ನು ರಜೆ ನೀಡಿ ಕರ್ನಾಟಕ ಬಂದ್‌ಗೆ ಸಹಕಾರ ನೀಡುವಂತೆ ರೈತಸಂಘದ ಕಾರ್ಯಕರ್ತರು ಕರೆ ನೀಡಿದ ಹಿನ್ನೆಲೆಯಲ್ಲಿ ಪಟ್ಟಣವು ಶಾಲೆಗಳಿಗೆ ರಜೆ ನೀಡಿದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ ನಡೆಸಿದರು. ಪಟ್ಟಣದ ನಿರ್ಮಲಾ ಕಾನ್ವೆಂಟ್‌ಗೆ ರಜೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಎದುರು ಪ್ರತಿಭಟನೆ ನಡೆಸಲಾಯಿತು.ಬಳಿಕ ಅಲ್ಲಿಂದ ಪಟ್ಟಣದ ಐದು ದೀಪದ ವೃತ್ತದಲ್ಲಿ ಸೇರಿದ ವಿದ್ಯಾರ್ಥಿಗಳು ಹಾಗೂ ರೈತಸಂಘದ ಕಾರ್‍ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ರಸ್ತೆ ತಡೆದು ಸಾರ್ವಜನಿಕರು ಬಂದ್‌ಗೆ ಸಹಕಾರ ನೀಡಬೇಕು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ತಾಲೂಕು ಅಧ್ಯಕ್ಷ ಮಂಜುನಾಥ್, ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್, ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.