ಜಿಮ್ಸ್-ಜಯದೇವ ಆಸ್ಪತ್ರೆಗೆ ಶಾಸಕ ಅಲ್ಲಮಪ್ರಭು ಭೇಟಿ

| Published : Jun 20 2024, 01:04 AM IST

ಸಾರಾಂಶ

ಕಲಬುರಗಿ ನಗರದ ಜಿಮ್ಸ್ ಅಸ್ಪತ್ರೆ ಮತ್ತು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಗೆ ಬುಧವಾರ ಗುಲ್ಬರ್ಗ ದಕ್ಷಿಣ ಶಾಸಕ ಅಲ್ಲಮಪ್ರಭು ಭೇಟಿ ನೀಡಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಂತೆ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕಲಬುರಗಿ ನಗರದ ಜಿಮ್ಸ್ ಅಸ್ಪತ್ರೆ ಮತ್ತು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಗೆ ಬುಧವಾರ ಗುಲ್ಬರ್ಗ ದಕ್ಷಿಣ ಶಾಸಕ ಅಲ್ಲಮಪ್ರಭು ಭೇಟಿ ನೀಡಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಂತೆ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದರು.

ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಯಲ್ಲಿ ಸ್ವಚ್ಛ ನೀರು ಪೂರೈಕೆ ಇಲ್ಲದೆ ವೈದ್ಯಕೀಯ ಸೇವೆ ವ್ಯತ್ಯಯಾವಾಗುತ್ತಿರುವ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶಾಸಕರು ಜಿಮ್ಸ್ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಲ್ಲದೆ ಆಸ್ಪತ್ರೆ ಅಧಿಕಾರಿಗಳಿಂದ ರೋಗಿಗಳಿಗೆ ನೀಡಲಾಗುತ್ತಿರುವ ಸೆವೆ, ಉಪಚಾರದ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದೇ ಸಂಸರ್ಭದಲ್ಲಿ ಜಿಮ್ಸ್ ನಿರ್ದೇಶಕ ಡಾ.ಉಮೇಶ್ ಎಸ್.ಆರ್. ಮತ್ತು ಜಯದೇವ ಆಸ್ಪತ್ರೆಯ ವೈದ್ಯ ಡಾ.ವೀರೇಶ ಪಾಟೀಲ ಅವರಿಗೆ ಆಸ್ಪತ್ರೆಯಲ್ಲಿ ಸಕಲ ಮೂಲಸೌಕರ್ಯ ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು. ರೋಗಿಗಳಿಗೆ ನೀಡಲಾಗುವ ವೈದ್ಯಕೀಯ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.