ಕನ್ನಡ ಜ್ಯೋತಿ ರಥ ಸ್ವಾಗತಿಸಿದ ಶಾಸಕ ಆಸೀಫ್‌ ಸೇಠ್

| Published : Oct 05 2024, 01:40 AM IST

ಕನ್ನಡ ಜ್ಯೋತಿ ರಥ ಸ್ವಾಗತಿಸಿದ ಶಾಸಕ ಆಸೀಫ್‌ ಸೇಠ್
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯದಲ್ಲಿ 2024ರ ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಗುರುವಾರ ಬೆಳಗಾವಿ ನಗರಕ್ಕೆ ಆಗಮಿಸಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಂಡ್ಯದಲ್ಲಿ 2024ರ ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಗುರುವಾರ ಬೆಳಗಾವಿ ನಗರಕ್ಕೆ ಆಗಮಿಸಿತು. ಖಾನಾಪುರದಿಂದ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ನಗರದ ಚನ್ನಮ್ಮ ವೃತ್ತದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ಭುವನೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸ್ವಾಗತಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಬೆಳಗಾವಿ ತಹಶೀಲ್ದಾರ ಬಸವರಾಜ ನಾಗರಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರ, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷೆ ಮಂಗಳಾ ಮೆಟಗುಡ್ಡ ಹಾಗೂ ವಿವಿಧ ಕನ್ನಡ ಪರ ಸಂಘಟನೆ ಪದಾಧಿಕಾರಿಗಳು ಇದ್ದರು.