ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಶಾಸಕ ಬಾಬಾಸಾಹೇಬ ಪಾಟೀಲ ಅವರ 53ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಿದರು.ಬೆಳಗ್ಗೆ ೮ ಗಂಟೆಗೆ ಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಪತ್ನಿ ರೋಹಿಣಿ ಪಾಟೀಲ ಪಟ್ಟಣದ ಐತಿಹಾಸಿಕ ಕೋಟೆಯಲ್ಲಿರುವ ಗ್ರಾಮ ದೇವತೆಯರಿಗೆ ಹಾಗೂ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.ನಂತರ ಅಲ್ಲಿಂದ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಜೊತೆಗೂಡಿ ಹೆದ್ದಾರಿ ಪಕ್ಕದ ಚನ್ನಮ್ಮಾಜಿಯ ವರ್ತುಳಕ್ಕೆ ತೆರಳಿದ ಪಾಟೀಲ ಕುಟುಂಬ ಚನ್ನಮ್ಮಾಜಿಗೆ ಹಾಗೂ ವೀರರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಏರ್ಪಡಿಸಿದ್ದ ಉಚಿತ ಉಪಹಾರಕ್ಕೆ ಚಾಲನೆ ನೀಡಿದರು.ನಂತರ ಪಟ್ಟಣದ ಪ್ರಮುಖ ಬಸ್ ನಿಲ್ದಾಣದಲ್ಲಿ ಸಸಿ ನಡುವ ಮೂಲಕ ಹುಟ್ಟು ಹಬ್ಬವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು.ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷ ಜೈಸಿದ್ದರಾಮ ಮಾರಿಹಾಳ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಫ್.ಜಕಾತಿ, ಮುಖಂಡರಾದ ಅಪ್ಪಾಸಾಹೇಬ ಶಿಲೇದಾರ, ಆಶ್ಪಾಕ್ ಹವಾಲ್ದಾರ, ಬಸವರಾಜ ಸಂಗೊಳ್ಳಿ, ಸುನೀಲ ಘೀವಾರಿ, ಚಂದ್ರಗೌಡ ಪಾಟೀಲ, ಪಪಂ ಸದಸ್ಯರು ಸೇರಿದಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.ಬುಕ್ ಹಾಗೂ ಪೆನ್ ವಿತರಣೆ
ಪಟ್ಟಣದ ಎಲ್ಲ ಪ್ರೌಡಶಾಲೆಗಳಲ್ಲಿ ಶಾಸಕ ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಾಗೂ ಕಾರ್ಯಕರ್ತರಿಂದ ಉಚಿತವಾಗಿ ಬುಕ್ ಹಾಗೂ ಪೆನ್ ವಿತರಿಸಲಾಯಿತು. ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಈ ಕಾರ್ಯಗಳು ದಾರಿದೀಪವಾಗಿವೆ.