ಸಾರಾಂಶ
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಶಾಸಕ ಸಿ ಎನ್ ಬಾಲಕೃಷ್ಣರವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು.ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಹೆಚ್ಚಿನ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಸಹಕಾರ ನೀಡಿ ಅನೇಕ ಕೆರೆಗಳನ್ನು ತುಂಬಿಸಲು ಹೆಚ್ಚು ಶ್ರಮವಹಿಸಿದ್ದಾರೆ. ರಾಜ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗೆ ರೈತರ ಪರವಾಗಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಅವರು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದು, ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಅಲೆ ಇದ್ದು ಅವರ ಗೆಲುವು ನಿಶ್ಚಿತವಾಗಿದೆ ಎಂದರು.
ಕೃಷಿ ಪತ್ತಿನ ನಿರ್ದೇಶಕ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್ ಮಾತನಾಡಿ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಸ್ವಯಂ ಪ್ರೇರಿತವಾಗಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸುತ್ತಿದ್ದು, ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಎಚ್ ಡಿ ಕುಮಾರಸ್ವಾಮಿ ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ, ಅಭಿವೃದ್ಧಿ ದೃಷ್ಟಿಯಿಂದ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿಯವರಿಗೆ ಹೆಚ್ಚಿನ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಲಾಗಿತ್ತು ಎಂದರು.ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಭುವನಹಳ್ಳಿ ಯೋಗೇಶ್, ಜಂಬೂರು ಮಹೇಶ್, ಉದ್ಯಮಿ ಜಯರಾಮ್, ಮುಖಂಡರಾದ ಗನ್ನಿ ಸತೀಶ್, ಪ್ರಮೋದ್, ದೊಡ್ಡಗನ್ನಿ ಮಂಜು , ನವೀನ್, ರಾಜೇಶ್, ಅಭಿ, ಮಲ್ಲೇಶ್, ಇದ್ದರು.