ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡು ವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸು ವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿ ವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪೌರಕಾರ್ಮಿಕರ ಶ್ರಮ ಮತ್ತು ಸೇವೆಯಿಂದ ಪಟ್ಟಣ ಸ್ವಚ್ಛವಾಗಿರಲು ಸಾಧ್ಯವಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಅವರು ಹೇಳಿದರು.ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಪುರಸಭೆ ವತಿಯಿಂದ ಆಯೋಜಿಸಿದ್ದ ಪೌರಕಾರ್ಮಿಕರ ದಿನಾ ಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಪ್ರತಿ ದಿನ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿದ್ದು, ಅವರ ಸೇವೆ ಸಮಾಜಕ್ಕೆ ಅತ್ಯಂತ ಮಹತ್ವದ್ದಾಗಿದೆ. ಸ್ವಚ್ಛ ಪರಿಸರ ನಿರ್ಮಾಣದಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯವಾಗಿದೆ. ಅವರ ಶ್ರಮ ವನ್ನು ಪ್ರತಿ ಯೊಬ್ಬರೂ ಗೌರವಿಸಬೇಕು ಎಂದರು.ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡು ವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸು ವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿ ವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ ಎಂದು ತಿಳಿಸಿದರು.ನಿಮ್ಮ ಉತ್ತಮ ಆರೋಗ್ಯದಿಂದ ಪಟ್ಟಣದ ಉತ್ತಮ ಆರೋಗ್ಯ ಸಾಧ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಒಳ್ಳೆ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದರು.ಪಟ್ಟಣದ ಪೌರಕಾರ್ಮಿಕರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಮಾರನಹಳ್ಳಿಯಲ್ಲಿ ೩ ಎಕರೆ ೧೮ ಗುಂಟೆ ಜಾಗವನ್ನು ಕಾಯ್ದಿರಿಸಲಾಗಿದ್ದು, ಟೌನ್ ಪ್ಲಾನಿಂಗ್ ಅನುಮೋದನೆಯೂ ದೊರೆ ತಿದೆ. ಮುಂದಿನ ದಿನಗಳಲ್ಲಿ ಸುಸಜ್ಜಿತ ಬಡಾವಣೆ ನಿರ್ಮಿಸಿ ಪೌರಕಾರ್ಮಿಕರಿಗೆ ನಿವೇಶನ ಗಳನ್ನು ಹಸ್ತಾಂತರಿಸಲಾಗು ವುದು. ಪಟ್ಟಣವು ದಿನದಿಂದ ದಿನಕ್ಕೆ ವಿಸ್ತಾರವಾಗಿ ಬೆಳೆಯುತ್ತಿದ್ದು, ವಸತಿ ಪ್ರದೇಶಗಳ ಹೆಚ್ಚಳಕ್ಕೆ ಅನುಗುಣವಾಗಿ ಜನಸಂಖ್ಯೆಯೂ ಹೆಚ್ಚುತ್ತಿದೆಂದು ಮಾಹಿತಿ ನೀಡಿದರು.ಪಟ್ಟಣದ ಸ್ವಚ್ಛತೆ ಮತ್ತು ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಲು ಇನ್ನೂ ಹೆಚ್ಚುವರಿಯಾಗಿ ೩೦ ಪೌರ ಕಾರ್ಮಿಕರ ಅಗತ್ಯವಿದೆ. ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸುವುದು ಹಾಗೂ ಅವರನ್ನು ಕಾಯಂ ಗೊಳಿಸುವ ಕುರಿತು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಅವರ ಪರವಾಗಿ ಧ್ವನಿ ಎತ್ತಲಾಗುವುದೆಂದು ಭರವಸೆ ನೀಡಿದರು.ಪುರಸಭೆಗೆ ಸರ್ಕಾರದಿಂದ ನಿಗದಿತ ಅನುದಾನ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದರೂ, ತೆರಿಗೆ ಸೋರಿಕೆಯಾಗ ದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಕಳೆದ ಐದು ವ?ಗಳಲ್ಲಿ ೨೫ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪಟ್ಟಣದ ಣದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.ಪಟ್ಟಣದಲ್ಲಿರುವ ಉದ್ಯಾನವನಗ ಳನ್ನು ಅಭಿವೃದ್ಧಿಪಡಿಸಿ, ಮಕ್ಕಳ ಆಟಕ್ಕೆ ಅಗತ್ಯ ಸೌಲಭ್ಯಗಳು ಹಾಗೂ ಸಾರ್ವ ಜನಿಕರ ವ್ಯಾಯಾಮಕ್ಕಾಗಿ ವಿವಿಧ ಉಪಕರಣಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ, ಅವರ ಕಲ್ಯಾಣಕ್ಕೆ ವೈಯಕ್ತಿಕವಾಗಿ ಒಂದು ತಿಂಗಳ ವೇತನವನ್ನು ನೀಡಲು ಮುಂದಾಗಿರುವುದಾಗಿ ತಿಳಿಸಿದ ಶಾಸಕರು, ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಪಟ್ಟಣದ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಗೆದ್ದ ಪೌರಕಾರ್ಮಿಕರಿಗೆ ಬಹು ಮಾನ ವಿತರಣೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೌರಕಾರ್ಮಿ ಕರಿಗೆ ಸನ್ಮಾನಿಸಲಾಯಿತು.ಕಾರ್ಯಕ್ರಮಕ್ಕೂ ಮುನ್ನಾ ಎಲ್ಲಾ ಪೌರಕಾರ್ಮಿಕರು ಪಟ್ಟಣದ ಪುರಸಭಕಾರ್ಯಾಲಯದಿಂದ ಅಂಬೇಡ್ಕರ್ ಭವನದವರೆಗೂ ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯುದ್ದಕ್ಕೂ ಡಿಜೆ ಸೌಂಡ್ಸ್ ಗೆ ಪೌರಕಾರ್ಮಿಕರು, ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಸೇರಿ ಪುರಸಭಾ ಸದಸ್ಯರು ಸಂಭ್ರಮಿಸಿದರು. ರಾಜ್ಯ ಪೌರ ಸೇವೆ ನೌಕರರ ಸಂಘದ ರಾಜ್ಯಾಧ್ಯಕ್ಷೆ ಕೆ.ಡಿ.ಶೈಲಾ ಮಾತನಾಡಿದರು, ಮುಖ್ಯಾಧಿಕಾರಿ ಪ್ರಕಾಶ್, ಪರಿಸರ ಅಭಿಯಂತರಾದ ರುಚಿ ದರ್ಶಿನಿ, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಹೆಚ್.ಮೂರ್ತಿ, ಕಚೇರಿ ವ್ಯವಸ್ಥಾಪಕಿ ಎಲ್.ಬಿ.ಆಶಾದೇವಿ ಸಮುದಾಯ ಸಂಘಟನಾಧಿಕಾರಿ ಶಾರದಮ್ಮ, ಕಂದಾಯ ಅಧಿಕಾರಿ ಟಿ. ರವಿಕುಮಾರ್, ಪುರಸಭೆ ಆಡಳಿತ ಸಿಬ್ಬಂದಿ ವರ್ಗ ಹಾಗು ಪೌರಕಾರ್ಮಿಕರು ಭಾಗವಹಿಸಿದ್ದರು.