ಸಾವಿರಾರು ವರ್ಷಗಳ ಜ್ಞಾನ ಪರಂಪರೆಯನ್ನು ಒಳಗೊಂಡಿರುವ ತಾಳೆಗರಿ ಗ್ರಂಥಗಳ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ. ಗ್ರಂಥಗಳ ವೈಜ್ಞಾನಿಕ ಸಂರಕ್ಷಣೆ, ಡಿಜಿಟಲೀಕರಣ, ಸಂಶೋಧನೆ ಹಾಗೂ ಅಧ್ಯಯನಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಯಿತು. ಮನವಿಗೆ ಸಚಿವ ಪ್ರಹ್ಲಾದ್ ಜೋಷಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ಅಭಿವೃದ್ಧಿ ಹಾಗೂ ತಾಳೆಗರಿ ಗ್ರಂಥಗಳ ಸಂರಕ್ಷಣೆಗೆ ಅಗತ್ಯ ಅನುದಾನ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಶ್ರವಣಬೆಳಗೊಳ ಸಮೀಪದ ಶ್ರೀ ದವಲತೀಥಂನಲ್ಲಿರುವ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ಸಮಗ್ರ ಅಭಿವೃದ್ಧಿ ಹಾಗೂ ಕೇಂದ್ರದಲ್ಲಿ ಸಂಗ್ರಹಿಸಿರುವ ಸುಮಾರು ೧೨ ಸಾವಿರ ತಾಳೆಗರಿ ಗ್ರಂಥಗಳ ಸಂರಕ್ಷಣೆಗಾಗಿ ವಿಶೇಷ ಅನುದಾನ ಒದಗಿಸುವಂತೆ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಶಾಸಕ ಸಿ.ಎನ್.ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿ, ಶ್ರವಣಬೆಳಗೊಳವು ಜೈನಧರ್ಮ, ಪ್ರಾಕೃತ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಪ್ರಮುಖ ಕೇಂದ್ರವಾಗಿದ್ದು, ಇಲ್ಲಿನ ಪ್ರಾಚೀನ ತಾಳೆಗರಿ ಗ್ರಂಥಗಳು ಅಪೂರ್ವ ಐತಿಹಾಸಿಕ ಮತ್ತು ಶೈಕ್ಷಣಿಕ ಸಂಪತ್ತಾಗಿವೆ ಎಂದು ಸಚಿವರ ಗಮನಕ್ಕೆ ತಂದಿತು. ಸಾವಿರಾರು ವರ್ಷಗಳ ಜ್ಞಾನ ಪರಂಪರೆಯನ್ನು ಒಳಗೊಂಡಿರುವ ತಾಳೆಗರಿ ಗ್ರಂಥಗಳ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ. ಗ್ರಂಥಗಳ ವೈಜ್ಞಾನಿಕ ಸಂರಕ್ಷಣೆ, ಡಿಜಿಟಲೀಕರಣ, ಸಂಶೋಧನೆ ಹಾಗೂ ಅಧ್ಯಯನಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಯಿತು. ಮನವಿಗೆ ಸಚಿವ ಪ್ರಹ್ಲಾದ್ ಜೋಷಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ಅಭಿವೃದ್ಧಿ ಹಾಗೂ ತಾಳೆಗರಿ ಗ್ರಂಥಗಳ ಸಂರಕ್ಷಣೆಗೆ ಅಗತ್ಯ ಅನುದಾನ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ವೇಳೆ ಶ್ರೀಜೈನ ಮಠದ ಪ್ರತಿನಿಧಿ ರಾಜೇಶ್ ಖನ್ನಾ ಉಪಸ್ಥಿತರಿದ್ದರು.