ಸಾರಾಂಶ
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ದಿ ಶೋಭಾಯಾತ್ರೆ ಆರಂಭಕ್ಕೂ ಮುನ್ನ ತೆರಳಿ ಹಿಂದೂ ಮಹಾ ಗಣಪತಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದರು.
ಬಳ್ಳಾರಿ: ಕಳೆದ ಹಲವು ವರ್ಷಗಳಿಂದ ನಗರದ ಸೆಂಟೆನರಿ ಸಭಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಷ್ಠಾಪಿಸುತ್ತಿರುವ ಹಿಂದೂ ಮಹಾ ಗಣಪತಿಯ ಶೋಭಾಯಾತ್ರೆಯು ಶುಕ್ರವಾರ ಸಂಜೆ ನಡೆಯಿತು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ದಿ ಶೋಭಾಯಾತ್ರೆ ಆರಂಭಕ್ಕೂ ಮುನ್ನ ತೆರಳಿ ಹಿಂದೂ ಮಹಾ ಗಣಪತಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದರು.
ಸಂಘಟಕರು ಶಾಸಕ ನಾರಾ ಭರತ್ ರೆಡ್ಡಿಯವರಿಗೆ ಕೇಸರಿ ಪೇಟಾ ಸುತ್ತುವ ಮೂಲಕ ಗೌರವ ಸಲ್ಲಿಸಿದರು. ಸೆಂಟೆನರಿ ಸಭಾಂಗಣದಿಂದ ಗಡಿಗಿ ಚನ್ನಪ್ಪ ವೃತ್ತದವರೆಗೆ ಶಾಸಕ ನಾರಾ ಭರತ್ ರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಹೆಜ್ಜೆ ಹಾಕಿದರು.ಶೋಭಾಯಾತ್ರೆಯಲ್ಲಿ ಭಾಗವಹಿಸುವ ಶ್ರೀಗಣೇಶನ ಭಕ್ತರು, ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ 5 ಸಾವಿರ ನೀರಿನ ಬಾಟಲ್ ಪೂರೈಸುವ ಮೂಲಕ ಶಾಸಕ ನಾರಾ ಭರತ್ ರೆಡ್ಡಿ ವೈಯಕ್ತಿಕವಾಗಿ ಭಕ್ತಿಸೇವೆ ಸಲ್ಲಿಸಿದರು.
ಮಹಾನಗರ ಪಾಲಿಕೆಯ ಸದಸ್ಯ ನೂರ್ ಮಹಮ್ಮದ್, ಮಿಂಚು ಶ್ರೀನಿವಾಸ್, ಉದ್ಯಮಿ ಉಮೇಶ್ ರೆಡ್ಡಿ, ಶಬರಿ ರವಿ ಇದ್ದರು.ಬಳ್ಳಾರಿಯಲ್ಲಿ ಶುಕ್ರವಾರ ಸಂಜೆ ಜರುಗಿದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಪಾಲ್ಗೊಂಡಿದ್ದರು.