ಸಾರಾಂಶ
ಶಾಸಕ ಭೀಮಣ್ಣ ನಾಯ್ಕ ಅವರು ಹಾಳದಕಟ್ಟಾದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಚಾರ್ಯ ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದರು.
ಸಿದ್ದಾಪುರ: ತಾಲೂಕಿನ ವಿವಿಧ ಕಾಲೇಜುಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಮೂಲ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ತಾಲೂಕಿನ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಪ್ರಾಚಾರ್ಯರು, ಉಪನ್ಯಾಸಕರ ಜತೆ ಚರ್ಚೆ ನಡೆಸಿ, ಸಮಸ್ಯೆ ಆಲಿಸಿ ಕಾಲೇಜಿಗೆ ಅಗತ್ಯವಿರುವ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ. ಪ್ರವೇಶಾತಿ ಬಯಸಿ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶ ನೀಡುವಂತೆ ಪ್ರಾಚಾರ್ಯರಿಗೆ ಸೂಚಿಸಿದರು. ನಂತರ ಹಾಳದಕಟ್ಟಾದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಚಾರ್ಯ ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದರು.ಮಧ್ಯಾಹ್ನ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಹಾಜರಾತಿ, ಶಿಸ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ಪಡೆದು ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರುಗಳಾದ ಸತೀಶ ನಾಯ್ಕ, ಶಾಂತಾರಾಮ, ಬಿ.ಎಸ್. ಹೆಗಡೆ, ಪ್ರಮುಖರಾದ ಕೆ.ಜಿ. ನಾಗರಾಜ, ಬಿ.ಆರ್. ನಾಯ್ಕ, ಬಾಲಕೃಷ್ಣ ನಾಯ್ಕ, ಬಾಬು ನಾಯ್ಕ, ಅಣ್ಣಪ್ಪ ಶಿರಳಗಿ, ಮಂಜುನಾಥ ನಾಯ್ಕ ತ್ಯಾರ್ಸಿ ಮುಂತಾದವರು ಉಪಸ್ಥಿತರಿದ್ದರು.ರೈತರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿಸಿದ್ದಾಪುರ: ಮಳೆಗಾಲ ಮತ್ತು ಶೈಕ್ಷಣಿಕ ಅವಧಿ ಪ್ರಾರಂಭವಾಗಿರುವ ಹಿನ್ನೆಲೆ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಮನಹರಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.
ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ರೈತರಿಗೆ ಅಗತ್ಯವಾದ ಬೀಜ, ಗೊಬ್ಬರ, ಮೈಲುತುತ್ತ, ಸುಣ್ಣ ಹಾಗೂ ಇತರ ಔಷಧಗಳನ್ನು ಸರಿಯಾಗಿ ನೀಡಬೇಕು. ಕೃಷಿಕರಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಸಲಹೆ, ಸೂಚನೆ ನೀಡಬೇಕು ಎಂದರು.ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡಿದ್ದು, ಸರ್ಕಾರದ ವಸತಿನಿಲಯಗಳ ಪ್ರವೇಶ ಪ್ರಕ್ರಿಯೆ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇದ್ದರು.