ಕನ್ನಡಪ್ರಭ ವಾರ್ತೆ ಸಕಲೇಶಪುರ

ಸುಮಾರು 15 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶುದ್ದ ಕುಡಿಯುವ ನೀರಿನ ಘಟಕ ಶೀಘ್ರದಲ್ಲಿ ಲೋಕಾರ್ಪಣೆಯಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಸಂತೇವೇರಿ ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣದ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಸಂತೇವೇರಿ ಬಡಾವಣೆಯಲ್ಲಿ ತಲಾ ₹5ಲಕ್ಷ ವೆಚ್ಚದಲ್ಲಿ ಒಟ್ಟು 10 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ. ಇದರಿಂದ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ದೊರಕುವಂತಾಗಿದೆ. ಪಟ್ಟಣದಲ್ಲಿ ಅಮೃತ್ 2 ಯೋಜನೆಯಡಿ ಸುಮಾರು 15 ಕೋಟಿ ರು. ವೆಚ್ಚದಲ್ಲಿ ಇಡೀ ಪಟ್ಟಣಕ್ಕೆ ಶುದ್ಧ ನೀರು ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕಾಮಗಾರಿ ಮುಗಿದರೆ ಪ್ರತಿಯೊಂದು ಕುಟುಂಬಗಳಿಗೂ ಶುದ್ಧ ಕುಡಿಯುವ ನೀರು ದೊರಕುತ್ತದೆ ಎಂದರು.

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ, ಬಿಜೆಪಿ ಮುಖಂಡರುಗಳಾದ ವಿನಯ್, ನವೀನ್ ಶೆಟ್ಟಿ, ಮದನ್, ಚಂದ್ರಣ್ಣ ಮುಂತಾದವರು ಹಾಜರಿದ್ದರು.