ಸಮತೋಲಿತ ಬಜೆಟ್ ಮಂಡನೆ: ಡಿ. ರವಿಶಂಕರ್

| Published : Feb 17 2024, 01:15 AM IST

ಸಾರಾಂಶ

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡುವುದರ ಜತೆಗೆ ಕೃಷಿ ಕ್ಷೇತ್ರಕ್ಕೂ ಭರಪೂರ ಕೊಡುಗೆ ನೀಡಿರುವ ಮುಖ್ಯಮಂತ್ರಿಗಳು ಎಲ್ಲ ಕ್ಷೇತ್ರಗಳಿಗೂ ಸಮಾನ ಅವಕಾಶ ಮಾಡಿಕೊಟ್ಟು ಅಗತ್ಯ ಅನುದಾನ ಮೀಸಲಿಟ್ಟಿರುವುದರಿಂದ ಇದು ಜನಪರ ಮತ್ತು ಅಭಿವೃದ್ದಿ ಪರವಾದ ಬಜೆಟ್ ಆಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಪಂಚ ಗ್ಯಾರಂಟಿಗಳ ಅನುಷ್ಠಾನದ ಜತೆಗೆ ರಾಜ್ಯ ಬಜೆಟ್‌ನಲ್ಲಿ ರೈತರು, ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಉದ್ಯಮಿಗಳು ಸೇರಿದಂತೆ ಸರ್ವ ಜನಾಂಗಕ್ಕೂ ಅನುಕೂಲವಾಗುವ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳನ್ನು ಶಾಸಕ ಡಿ. ರವಿಶಂಕರ್ ಅಭಿನಂದಿಸಿದ್ದಾರೆ.

ಬಜೆಟ್ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು ಗ್ಯಾರಂಟಿ ಯೋಜನೆಗಳಿಗೆ 53 ಸಾವಿರ ಕೋಟಿ ಹಣ ಮೀಸಲಿಟ್ಟು ಅದರೊಟ್ಟಿಗೆ ಹತ್ತಾರು ಜನಪ್ರಿಯ ಯೋಜನೆಗಳನ್ನು ಜನತೆ ನೀಡಿರುವ ಮುಖ್ಯಮಂತ್ರಿಗಳು ದೇಶದಲ್ಲಿಯೇ ಉತ್ತಮವಾದ ಬಜೆಟ್ ಮಂಡಿಸಿದ್ದು, ಇದು ಅಭಿವೃದ್ದಿಗೆ ಪೂರಕವಾಗಿದೆ ಎಂದಿದ್ದಾರೆ.