2 ಕೋಟಿ ರೂ.ವೆಚ್ಚದ ಸೋಪಾನಕಟ್ಟೆ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿಪೂಜೆ

| Published : Jun 20 2024, 01:00 AM IST

2 ಕೋಟಿ ರೂ.ವೆಚ್ಚದ ಸೋಪಾನಕಟ್ಟೆ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಹುಲ್ಲಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದ ವೇಳೆ ಸಾರ್ವಜನಿಕರು ಕಪಿಲಾ ನದಿಗೆ ಸೋಪಾನಕಟ್ಟೆ ನಿರ್ಮಿಸಿಕೊಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಸಣ್ಣ ನಿರಾವರಿ ಇಲಾಖೆ ಸಚಿವ ಬೋಸರಾಜು ಅವರನ್ನು ಮನವಿ ಮಾಡಿದ ಮೇರೆಗೆ 5 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಆ ಅನುದಾನದಲ್ಲಿ ತಲಾ ಒಂದು ಕೋಟಿ ವೆಚ್ಚದಲ್ಲಿ ನಂಜನಗೂಡು ಮತ್ತು ಹುಲ್ಲಹಳ್ಳಿ ಗ್ರಾಮದಲ್ಲಿ ಸೋಪಾನ ಕಟ್ಟೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಸಣ್ಣ ನೀರಾವರಿ ಇಲಾಖೆಯ ಅನುದಾನದಡಿಯಲ್ಲಿ ನಗರದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಸ್ನಾನ ಘಟ್ಟದ ಬಳಿ ಒಂದು ಕೋಟಿ ವೆಚ್ಚದಲ್ಲಿ ಹಾಗೂ ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಒಂದು ಕೋಟಿ ರು. ವೆಚ್ಚದಲ್ಲಿ ಸೋಪಾನಕಟ್ಟೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಮತ್ತು ಹುಲ್ಲಹಳ್ಳಿ ಗ್ರಾಮದಲ್ಲಿ 2 ಕೋಟಿ ವೆಚ್ಚದ ಸೋಪಾನಕಟ್ಟೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹುಲ್ಲಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದ ವೇಳೆ ಸಾರ್ವಜನಿಕರು ಕಪಿಲಾ ನದಿಗೆ ಸೋಪಾನಕಟ್ಟೆ ನಿರ್ಮಿಸಿಕೊಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಸಣ್ಣ ನಿರಾವರಿ ಇಲಾಖೆ ಸಚಿವ ಬೋಸರಾಜು ಅವರನ್ನು ಮನವಿ ಮಾಡಿದ ಮೇರೆಗೆ 5 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಆ ಅನುದಾನದಲ್ಲಿ ತಲಾ ಒಂದು ಕೋಟಿ ವೆಚ್ಚದಲ್ಲಿ ನಂಜನಗೂಡು ಮತ್ತು ಹುಲ್ಲಹಳ್ಳಿ ಗ್ರಾಮದಲ್ಲಿ ಸೋಪಾನ ಕಟ್ಟೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ತಾಲೂಕಿನ ಸಂಗಮ ಕ್ಷೇತ್ರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ, ಅಂಚಿಪುರ ಮತ್ತು ಹೊಸವೀಡು ಗ್ರಾಮದಲ್ಲಿ ತಲಾ 50 ಲಕ್ಷ ವೆಚ್ಚದಲ್ಲಿ ಸೋಪಾನಕಟ್ಟೆ ನಿರ್ಮಿಸಲಾಗುವುದು ಎಂದರು.

ಹುಲ್ಲಹಳ್ಳಿ ಗ್ರಾಮದಲ್ಲಿ ನಾಯಕ, ಪ. ಜಾತಿ ಸಮುದಾಯಗಳ ಸ್ಮಶಾನಗಳನ್ನು ಅಭಿವೃದ್ಧಿ ಮಾಡಿಕೊಡುವಂತೆ ಹಾಗೂ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ದಿ ಮಾಡಿಕೊಡುವಂತೆ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಕ್ಷೇತ್ರಕ್ಕೆ ಮುಖ್ಯಮಂತ್ರಿ ನಿಧಿಯಿಂದ 25 ಕೋಟಿ ರು. ವಿಶೇಷ ಅನುದಾನ ಬಿಡುಗಡೆ - ನಂಜನಗೂಡು ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಕೋಟಿ ರು. ಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಈ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ನಡೆಸಲಾಗುವುದು. ಜೊತೆಗೆ ಎಸ್ಇಪಿ, ಟಿಎಸ್ಪಿ ಅನುದಾನಗಳನ್ನು ಹೊರತು ಪಡಿಸಿ 37 ಗ್ರಾಮಗಳಲ್ಲಿ ಸಾಮಾನ್ಯ ವರ್ಗದ ಬೀದಿಗಳಲ್ಲೂ ಕೂಡ ಕಾಂಕ್ರಿಟ್ ರಸ್ತೆ ನಿರ್ಮಿಸಲು ಶೀಘ್ರದಲ್ಲೇ ಭೂಮಿಪೂಜೆಗಳನ್ನು ನೆರವೇರಿಸಲಾಗುವುದು ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯಕ, ಸಿ.ಎಂ. ಶಂಕರ್, ಜಿಪಂ ಮಾಜಿ ಸದಸ್ಯ ಕೆ. ಮಾರುತಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ರಾಜ್, ಚಾಮರಾಜು, ಮುಖಂಡರಾದ ಅನ್ಸರ್ ಅಹಮದ್, ಶಿವನಂಜನಾಯಕ, ಎಂ. ಮಾದಪ್ಪ, ಪಾಪಣ್ಣ, ಗೋವಿಂದರಾಜು, ನಾಗರಾಜಯ್ಯ, ರಾಜೇಶ್, ಎಂ.ಎನ್. ಮಂಜುನಾಥ್, ನಗರಸಭಾ ಸದಸ್ಯರಾದ ಶ್ರೀಕಂಠಸ್ವಾಮಿ, ಗಾಯತ್ರಿ, ಪ್ರದೀಪ್, ಕೆ.ಎಂ. ಬಸವರಾಜು, ರವಿ, ಅಯ್ಯಸ್ವಾಮಿ ದೇವಾಲಯದ ಗುರುಸ್ವಾಮಿ ಪಿ. ದೇವರಾಜು ಇದ್ದರು.