ಶಾಸಕ ಅಜಯ್ ಸಿಂಗ್, ಎಲ್ಲರ ಮೇಲೆ ಒತ್ತಡ ತಂದು ಸಾವಿರಾರು ಕೋಟಿ ಅನುದಾನ ತಂದು ಬದಲಾವಣೆ ತರಲು ಕೆಲಸ ಮಾಡುತ್ತಿದ್ದಾರೆ. ಇಂತಹ ಶಾಸಕರು ಸಿಕ್ಕಿರುವುದು ನಿಮ್ಮ ಭಾಗ್ಯ. ಧರಂ ಸಿಂಗ್ ಅವರಿಗಿಂತ ಒಂದು ಕೈ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಕಲಬುರಗಿ: ಶಾಸಕ ಅಜಯ್ ಸಿಂಗ್, ಎಲ್ಲರ ಮೇಲೆ ಒತ್ತಡ ತಂದು ಸಾವಿರಾರು ಕೋಟಿ ಅನುದಾನ ತಂದು ಬದಲಾವಣೆ ತರಲು ಕೆಲಸ ಮಾಡುತ್ತಿದ್ದಾರೆ. ಇಂತಹ ಶಾಸಕರು ಸಿಕ್ಕಿರುವುದು ನಿಮ್ಮ ಭಾಗ್ಯ. ಧರಂ ಸಿಂಗ್ ಅವರಿಗಿಂತ ಒಂದು ಕೈ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಯಡ್ರಾಮಿಯಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಮಾತನಾಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿ, ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.ನಾವು ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದರು.

ಈ ಭಾಗದ ಅಭಿವೃದ್ಧಿಗೆ ಸಾವಿರಾರು ಕೋಟಿ ಮೊತ್ತದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ” ಎಂದರು.

ನಮ್ಮ ಸರ್ಕಾರ ಬಂದ ನಂತರ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳನ್ನು ಸಿಎಸ್ಆರ್ ಅನುದಾನದ ಅಡಿ ನಿರ್ಮಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ.

ಮನಮೋಹನ್ ಸಿಂಗ್ ಅವರ ಸರ್ಕಾರ ಖಾಸಗಿ ಉದ್ಯಮಗಳು 2% ಸಿಎಸ್ಆರ್ ನಿಧಿ ನೀಡಬೇಕು ಎಂದು ತೀರ್ಮಾನ ಮಾಡಿದರು.

ಈ ನಿಧಿಯನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ತೀರ್ಮಾನವನ್ನು ಬೇರೆ ಯಾವುದೇ ರಾಜ್ಯಗಳ ಮಾಡಿಲ್ಲ. ಅಜಯ್ ಸಿಂಗ್ ಅವರು ನೀರಾವರಿ ವಿಚಾರವಾಗಿ ಮಲ್ಲಾಬಾದ್ ಏತ ನೀರಾವರಿ ಯೋಜನೆ ಆಗಲೇಬೇಕು ಎಂದು ಪಟ್ಟು ಹಿಡಿದು, 360 ಕೋಟಿ ಅನುದಾನವನ್ನು ಪಡೆದಿದ್ದಾರೆ. ಇದಕ್ಕೆ ಕಳೆದ ಡಿ.30ರಂದು ಸಭೆಯಲ್ಲಿ ಅನುಮೋದನೆ ನೀಡಿದ್ದೇವೆ. ಈ ಯೋಜನೆ ಕಾಮಗಾರಿ ಕೆಲಸ ಪ್ರಾರಂಭವಾಗಿದೆ ಎಂದು ವಿವರಿಸಿದರು.

ಶಾಸಕ ಅಜಯ್ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ 1 ಎಕರೆ ಜಮೀನನ್ನು ದಾನವಾಗಿ ಬರೆದುಕೊಟ್ಟಿದ್ದಾರೆ. ಅವರಿಗೆ ಅಭಿನಂದಿಸೋದಾಗಿಯೂ ಡಿಕೆಶಿ ಹೇಳಿದರು.