ಈ ಹಿಂದೆ ಮದ್ದೂರು ಕ್ಷೇತ್ರ ಪ್ರತಿನಿದಿಸಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಮತ್ತು ಸೂರು ಕಲ್ಪಿಸಬೇಕೆಂಬ ಉದ್ದೇಶದಿಂದ ಶಿವಪುರ ಆಶ್ರಯ ಬಡಾವಣೆ ನಿರ್ಮಿಸಿ ಅರ್ಜಿದಾರರಿಗೆ ನಿವೇಶನ ಮಂಜೂರು ಮಾಡಿದ್ದರು.
ಮದ್ದೂರು:
ನಗರದ ಶಿವಪುರದ ಆಶ್ರಯ ಬಡಾವಣೆ ನಿವಾಸಿಗಳಿಗೆ ಮೂಲಸೌಲಭ್ಯ ಕಲ್ಪಿಸುವ ಜೊತೆಗೆ ಕಳೆದ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಹಕ್ಕುಪತ್ರ ವಿತರಣೆಗೆ ಶೀಘ್ರ ಕ್ರಮವಹಿಸುವುದಾಗಿ ಶಾಸಕ ಕೆ.ಎಂ.ಉದಯ ತಿಳಿಸಿದರು.ನಗರದ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಬಡಾವಣೆ ನಿವಾಸಿಗಳ ಆಯ್ದ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿ, ಈ ಹಿಂದೆ ಮದ್ದೂರು ಕ್ಷೇತ್ರ ಪ್ರತಿನಿದಿಸಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಮತ್ತು ಸೂರು ಕಲ್ಪಿಸಬೇಕೆಂಬ ಉದ್ದೇಶದಿಂದ ಶಿವಪುರ ಆಶ್ರಯ ಬಡಾವಣೆ ನಿರ್ಮಿಸಿ ಅರ್ಜಿದಾರರಿಗೆ ನಿವೇಶನ ಮಂಜೂರು ಮಾಡಿದ್ದರು ಎಂದರು.
ತಾವು ಶಾಸಕರಾದ ಮೂರು ವರ್ಷಗಳ ಅವಧಿಯಲ್ಲಿ ಆಶ್ರಯ ಬಡಾವಣೆ ನಿವಾಸಿಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಜತೆಗೆ ಸ್ಥಳಿಯ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುತ್ತಿದ್ದು, ಅನಧಿಕೃತ ಮತ್ತು ಹೆಚ್ಚುವರಿಯಾಗಿ ನಿವೇಶನ ಪಡೆದಿರುವ ಫಲಾನುಭವಿಗಳಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದರು.ಹಕ್ಕುಪತ್ರದ ನಿವೇಶನ ಪಡೆದಿರುವ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಸೂರು ಕಲ್ಪಿಸಲು ಮುಂದಾಗದಿದ್ದಲ್ಲಿ ನಗರಸಭೆ ಅಧಿಕಾರಿಗಳು ವಾಪಸ್ ಪಡೆಯಲಿದೆ. ಇದನ್ನರಿತು ನಿವಾಸಿಗಳು ತಮಗೆ ನೀಡಿರುವ ಗಡುವಿನೊಳಗೆ ಮನೆ ನಿರ್ಮಿಸುವಂತೆ ಸೂಚಿಸಿದರು.
ಸಾಂಕೇತಿಕವಾಗಿ 15 ಮಂದಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ್ದು, ಬಾಕಿ ಉಳಿ 154 ಮಂದಿಗೆ ಮುಂದಿನ ದಿನಗಳಲ್ಲಿ ಹಕ್ಕು ಪತ್ರ ವಿತರಿಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು. ಈ ವೇಳೆ ನಗರಸಭೆ ಪೌರಾಯುಕ್ತೆ ರಾಧಿಕಾ, ವ್ಯವಸ್ಥಾಪಕ ಶ್ರೀಧರ್, ಪರಿಸರ ಅಭಿಯಂತರೆ ಅರ್ಚನಾ, ಅಧಿಕಾರಿಗಳಾದ ಪುಟ್ಟಸ್ವಾಮಿ, ಲೋಕೇಶ್ ಇತರರಿದ್ದರು.ದೇವಾಲಯಗಳ ಹುಂಡಿ, ನಗದು ಹಾಗೂ ಅಮೂಲ್ಯ ವಸ್ತುಗಳ ಭದ್ರತೆಗೆ: ಡಾ.ಕುಮಾರ ಸೂಚನೆಮಂಡ್ಯ: ಜಿಲ್ಲೆಯ ದೇವಾಲಯಗಳ ಹುಂಡಿಗಳಲ್ಲಿನ ನಗದು ಹಣ, ಚಿನ್ನ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೇವಾಲಯಗಳ ಹುಂಡಿಗಳಲ್ಲಿರುವ ನಗದು ಹಣ, ಚಿನ್ನ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಸಂಬಂಧ ಸಭೆ ನಡೆಸಿದರು.ದೇವಾಲಯಗಳ ಹುಂಡಿಗಳನ್ನು ನಿಗದಿತ ವೇಳಾಪಟ್ಟಿಯಂತೆ ತೆರೆಯಬೇಕು ಹಾಗೂ ಎಣಿಕೆ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಮಿತಿ ಸದಸ್ಯರ ಸಮ್ಮುಖದಲ್ಲಿ ಪಾರದರ್ಶಕವಾಗಿ ನಡೆಸಬೇಕು. ನಗದು ಹಣ, ಚಿನ್ನ, ಬೆಳ್ಳಿ ಹಾಗೂ ಇತರೆ ಅಮೂಲ್ಯ ವಸ್ತುಗಳ ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಅವುಗಳನ್ನು ಸುರಕ್ಷಿತವಾಗಿ ಭದ್ರಪಡಿಸಬೇಕು ಎಂದರು.ಹುಂಡಿ ಎಣಿಕೆ ಪ್ರಕ್ರಿಯೆ ಸಂಪೂರ್ಣ ವಿವರಗಳನ್ನು ದಾಖಲಿಸಿ, ಆದಾಯ-ವೆಚ್ಚದ ಲೆಕ್ಕಪತ್ರಗಳನ್ನು ನಿಯಮಾನುಸಾರ ನಿರ್ವಹಿಸುವ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಬೇಕು. ಅಗತ್ಯವಿರುವ ಕಡೆ ಸಿಸಿಟಿವಿ ನಿಗಾ ವ್ಯವಸ್ಥೆ, ಪೊಲೀಸ್ ಭದ್ರತಾ ಸಿಬ್ಬಂದಿ ಹಾಗೂ ಸುರಕ್ಷಿತ ಸಂಗ್ರಹ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಮುಜರಾಯಿ ದೇವಸ್ಧಾನದಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದರು.ಸಭೆಯಲ್ಲಿ ಮುಜರಾಯಿ ತಹಸೀಲ್ದಾರ್ ತಮ್ಮಣ್ಣಗೌಡ ಹಾಗೂ ಎಲ್ಲಾ ತಾಲೂಕಿನ ತಹಸೀಲ್ದಾರ್ ಉಪಸ್ಥಿತರಿದ್ದರು.