ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ನಮೋಶಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಮನವಿ
ಕುಷ್ಟಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಾಸಕ ದೊಡ್ಡನಗೌಡ ಪಾಟೀಲ ಅವರು ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಪರವಾಗಿ ಶಿಕ್ಷಕರ ಮನೆ ಮನೆಗೆ ಭೇಟಿ ನೀಡಿ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.
ಶಿಕ್ಷಕರನ್ನು ನೇರವಾಗಿ ಸಂಪರ್ಕಿಸಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, ಶಿಕ್ಷಕರೊಂದಿಗೆ ಸಂವಾದ ನಡೆಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿನಂತಿಸಿದರು. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ನಮೋಶಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಕೆ ಮಹೇಶ, ಅಶೋಕ ಬಳೂಟಗಿ, ಉಮೇಶ ಯಾದವ್, ಮಹಾಂತೇಶ ಬಾದಾಮಿ, ವೀರಣ್ಣ ಸೊಬರದ್, ಮರಸಣ್ಣ ತಾಳದ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಿಕ್ಷಕರು ಇದ್ದರು.