ಸಾರಾಂಶ
ಹನೂರು ತಾಲೂಕಿನ ಗಡಿ ಗ್ರಾಮ ಹೂಗ್ಯಂ ಗ್ರಾಮದಿಂದ ಸಾರಿಗೆ ವಾಹನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಹನೂರು
ಗಡಿ ಗ್ರಾಮದ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು ಸಕಾಲಕ್ಕೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಜಲ್ಲಿಪಾಳ್ಯ ಗ್ರಾಮದಿಂದ ಹೊಸದಾಗಿ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ಹನೂರು ತಾಲೂಕಿನ ಹೂಗ್ಯಂ ಗ್ರಾಪಂ ವ್ಯಾಪ್ತಿಯ ಜಲ್ಲಿ ಪಾಳ್ಯ ನಾಲ್ ರೋಡ್, ರಾಮಪುರ ಮಾರ್ಗವಾಗಿ ಕೊಳ್ಳೇಗಾಲಕ್ಕೆ ತೆರಳುವ ಹೊಸ ರೂಟ್ ಬಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಂಚಿನ ಗ್ರಾಮಗಳ ಜನರ ಓಡಾಟ ಹೆಚ್ಚಾಗಿದೆ. ಆದರೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿತ್ತು. ಈ ಸಂಬಂಧ ಗ್ರಾಮಸ್ಥರು ನಮ್ಮ ಭಾಗಕ್ಕೆ ಹೊಸ ಬಸ್ ಬಿಡಿಸುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಹೊಸ ರೂಟ್ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಗ್ರಾಮಗಳಿಗೂ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಿ ವಿಸ್ತರಿಸುವಂತೆ ಸಾರಿಗೆ ಸಚಿವರಿಗೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ಹಲವು ಗ್ರಾಮಗಳಿಗೆ ಇನ್ನೂ ಸಮರ್ಪಕ ಸಾರಿಗೆ ಬಸ್ ವ್ಯವಸ್ಥೆ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿ ಹಳ್ಳಿಗೂ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗುಡ್ಡೆಯೂರು ಗ್ರಾಮದ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಲು ಹಂದಿಯೂರು ಕ್ಷೇತ್ರದ ಶಾಸಕರ ಸಹಕಾರ ಕೋರಲಾಗುವುದು ಎಂದರು. ಈ ವೇಳೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಶಂಕರ್, ಚರಣ್ ಗ್ರಾಪಂ ಸದಸ್ಯರಾದ ಪಳನಿಸ್ವಾಮಿ, ಶಿವಣ್ಣ, ಮಾದೇಶ್ ಮುಖಂಡರು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))