ಮೂರು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಚಾಲುಕ್ಯ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಜತೆಗೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರ್ಜರಿ ಸ್ಟೆಪ್ ಹಾಕಿ ಗಮನ ಸೆಳೆದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮೂರು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಚಾಲುಕ್ಯ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಜತೆಗೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರ್ಜರಿ ಸ್ಟೆಪ್ ಹಾಕಿ ಗಮನ ಸೆಳೆದರು. ಉತ್ಸವದ ಎರಡನೆಯ ದಿನವಾದ ಮಂಗಳವಾರ ರಾತ್ರಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ಅರ್ಜುನ ಜನ್ಯ ಅವರು ನಡೆಸಿಕೊಟ್ಟ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ನಟನೆಯ ಕೆ.ಡಿ.ಸಿನಿಮಾದ ಶಿವನೆ ನಿನ್ನಾಟ ಬಲ್ಲವರು ಯಾರ್‍ಯಾರೋ ಎಂಬ ಹಾಡಿಗೆ ಶಾಸಕ ಕಾಶಪ್ಪನವರ ಜನ್ಯರ ಅವರ ಕೈ ಹಿಡಿದು ಕುಣಿದರೆ, ಇವರೊಂದಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಸಹ ಕುಣಿದು ಕುಪ್ಪಳಿಸಿದರು. ಶಾಸಕರ ಕುಣತಕ್ಕೆ ಪ್ರೇಕ್ಷಕರು ಸಿಳ್ಳೆ, ಚಪ್ಪಾಳೆ ತಟ್ಟಿ ಹುರಿದುಂಬಿಸಿದರು.