ತರೀಕೆರೆಸ್ವಂತ ಮನೆ ಹೇಗೆ ಕಟ್ಟುತ್ತೀರೋ ಹಾಗೆ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಪೋಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆಸ್ವಂತ ಮನೆ ಹೇಗೆ ಕಟ್ಟುತ್ತೀರೋ ಹಾಗೆ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಶುಕ್ರವಾರ ಪಟ್ಟಣದಲ್ಲಿ ಪೊಲೀಸ್ ಗೃಹ-2025 (ಫೇಸ್-5) ಪ್ಯಾಕೇಜ್-66 ಯೋಜನೆಯಡಿ 12 ಪಿಸಿ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗುಣಮಟ್ಟದ ಶಾಶ್ವತ ಕಾಮಗಾರಿ ನಿರ್ವಹಿಸಬೇಕು, ಪಟ್ಟಣದಲ್ಲಿ ಮೂರು ಕಿ.ಮೀ.ದೂರದ ಸೀಮೆಂಟ್ ರಸ್ತೆ, ನೂತನ ಕೆಎಸ್.ಆರ್.ಟಿಸಿ ಬಸ್ ನಿಲ್ದಾಣ ನಿರ್ಮಾಣವಾಗುತ್ತಿದೆ. ಕೆ.ಎಸ್.ಆರ್.ಟಿ.ಸಿ.ಡಿಪೋ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುತ್ತಿದೆ ಎಂದರು.
ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡುತ್ತಾ ಸಿಬ್ಬಂದಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ವಾತಾವರಣ ಇದೆ. ತಾಯಿ ಮಗು ಆಸ್ಪತ್ರೆ ಉದ್ಘಾಟನೆ ಮತ್ತು ಪುರಸಭೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಶೀಘ್ರ ನೆರವೇರಿಸಲಾಗುವುದು ಎಂದು ಹೇಳಿದರು.ಪುರಸಭೆ ಸದಸ್ಯ ಟಿ.ಜಿ.ಲೋಕೇಶ್ ಮಾತನಾಡಿ ನಾವೆಲ್ಲರೂ ಅನ್ಯೋನ್ಯವಾಗಿ ನೆಮ್ಮದಿಯಿಂದ ಇರಲು ಪೊಲೀಸರು ಕಾರಣ. ತರೀಕೆರೆ ಠಾಣೆಯಲ್ಲಿ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಡಿವೈಎಸ್.ಪಿ.ಪರುಶುರಾಮಪ್ಪ ಮಾತನಾಡಿ ಪೊಲೀಸ್ ಸಿಬ್ಬಂದಿಗೆ ಒಂದೇ ಕಡೆ ವಸತಿ ಗೃಹಗಳಿದ್ದರೆ ಅನುಕೂಲವಾಗುತ್ತದೆ ಎಂದು ಹೇಳಿದರು.ಕಾರ್ಯನಿರ್ವಾಹಕ ಎಂಜಿನಿಯರ್ ವೀರಭದ್ರಪ್ಪ ಮಾತನಾಡಿ ಆಧುನಿಕವಾಗಿ ಸುಸಜ್ಜಿತ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ತಿಳಿಸಿದರು.
ಗ್ಯಾರಂಟಿ ಅನುಷ್ಠಾನ ಉಸ್ತುವಾರಿ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ಪುರಸಭೆ ಸದಸ್ಯ ಅದಿಲ್ ಪಾಷ, ಜಗದೀಶ್, ಸತ್ಯನಾರಾಯಣ್, ಪೋಲೀಸ್ ಇನ್ಸ್.ಪೆಕ್ಟರ್ ರಾಮಚಂದ್ರನಾಯಕ್, ಪುರಸಭೆ ಮುಖ್ಯಾಧಿಕಾರಿ ರಂಜನ್ ಮತ್ತಿತರರು ಭಾಗವಹಿಸಿದ್ದರು.-6ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ವಸತಿ ಗೃಹ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದರು. ಪುರಸಭೆ ಸದಸ್ಯ ಟಿ.ಜಿ.ಲೋಕೇಶ್, ಪುರಸಭೆ ನಾಮಿನಿ ಸದಸ್ಯ ಆದಿಲ್ ಪಾಷ, ಸಮೀವುಲ್ಲಾ ಷರೀಫ್, ಡಿವೈಎಸ್.ಪಿ. ಪರುಶುರಾಮಪ್ಪ, ಪೋಲೀಸ್ ಇನ್ಸ್ ಪೆಕ್ಟರ್ ರಾಮಚಂದ್ರನಾಯಕ್ ಮತ್ತಿತರರು ಇದ್ದರು.