ಸಾರಾಂಶ
ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 1ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಗುಂಡ್ಲುಪೇಟೆ: ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲಕ್ಷ ಮತಗಳಿಂದ ಗೆಲ್ಲುತ್ತಾರೆ ಎಂದು ಹೇಳಿದ್ದ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್‌ರ ಭವಿಷ್ಯ ನಿಜವಾಗಿದೆ. ಕಳೆದ ಮೇ 26 ರಂದು ಹಾಲಹಳ್ಳಿಯಲ್ಲಿ ಮತದಾನದ ಬಳಿಕ ಕನ್ನಡಪ್ರಭದೊಂದಿಗೆ ಮಾತನಾಡಿದ್ದ ಶಾಸಕ ಗಣೇಶ್, ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 1ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಡಾ.ಎಚ್.ಸಿ.ಮಹದೇವಪ್ಪ, 7 ಮಂದಿ ಶಾಸಕರು ಮತ್ತು ನಿಗಮ ಮಂಡಳಿ ಅಧ್ಯಕ್ಷರು ಇರುವಾಗ ಗೆಲುವಾಗಲಿದೆ ಎಂದು ಭವಿಷ್ಯ ನುಡಿದ್ದರು. ಮಂಗಳವಾರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ.