ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಒಂದು ಸುಸಜ್ಜಿತ ಭವನ ಅತ್ಯಗತ್ಯವಾಗಿದೆ
ಹೊಸಪೇಟೆ: ನಗರದ ಕಟ್ಟಡ ಕಾರ್ಮಿಕರ ಬಹುಕಾಲದ ಬೇಡಿಕೆಯಾದ ‘ಕಟ್ಟಡ ಕಾರ್ಮಿಕರ ಭವನ'''''''' ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ಶಾಸಕ ಎಚ್.ಆರ್. ಗವಿಯಪ್ಪ ಅವರನ್ನು ಭಾನುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸಭೆ-ಸಮಾರಂಭಗಳನ್ನು ನಡೆಸಲು, ಕಾರ್ಮಿಕರಿಗೆ ಅಗತ್ಯ ತರಬೇತಿ ನೀಡಲು ಹಾಗೂ ಕಾರ್ಮಿಕರ ಹಿತರಕ್ಷಣೆಗಾಗಿ ಪ್ರತ್ಯೇಕವಾದ ಭವನದ ಅಗತ್ಯವಿದೆ. ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಒಂದು ಸುಸಜ್ಜಿತ ಭವನ ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಿದರು.ಶಾಸಕರ ಭರವಸೆ:
ಕಾರ್ಮಿಕರ ಮನವಿಗೆ ಸಕಾರಾತ್ಮಕವಾಗಿ ಸ್ವೀಕರಿಸಿದ ಶಾಸಕ ಎಚ್.ಆರ್. ಗವಿಯಪ್ಪ ಅವರು, ಕಟ್ಟಡ ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದಾರೆ. ಅವರ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹೊಸಪೇಟೆ ನಗರದಲ್ಲಿ ಕಟ್ಟಡ ಕಾರ್ಮಿಕರ ಭವನ ನಿರ್ಮಿಸಲು ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಿ, ಶೀಘ್ರದಲ್ಲೇ ಭವನ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.ಹೊಸಪೇಟೆ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಜಿ. ಮೋಹನ್, ಅಧ್ಯಕ್ಷ ಮೌಲಾ ಸಾಹೇಬ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಣ್ಣದಮನೆ, ಖಜಾಂಚಿ ಬಸವರಾಜ್, ಮುಖಂಡರಾದ ಧರ್ಮಪ್ಪ, ಸಿ.ಎಸ್. ಮಣಿ, ತಿರುಮಲ, ಸುಬ್ರಮಣ್ಯ, ಬಾಲರಾಜ್, ಶಾಷು, ನಾಗರಾಜ್, ಅಹಮದ್, ಮಾರಿಮುತ್ತು, ಜೈರುದ್ಧಿನ್, ಗಿರೀಶ್ ಮತ್ತಿತರರಿದ್ದರು.ಹೊಸಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಭವನ ನಿರ್ಮಾಣಕ್ಕೆ ಒತ್ತಾಯಿಸಿ ಹೊಸಪೇಟೆ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.