ತರೀಕೆರೆ, ಶಾಸಕ ಜಿ.ಎಚ್.ಶ್ರೀನಿವಾಸ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.
ತರೀಕೆರೆಯಲ್ಲಿ 8ನೇ ವರ್ಷದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆಶಾಸಕ ಜಿ.ಎಚ್.ಶ್ರೀನಿವಾಸ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.
ಪಟ್ಟಣದ ಜೈ ಕರ್ನಾಟಕ ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಮಾಲೀಕರು ಮತ್ತ ಚಾಲಕರ ಸಂಘದಿಂದ ಕಚೇರಿ ಆವರಣದಲ್ಲಿ ನಡೆದ 8ನೇ ವರ್ಷದ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಪುರಸಭೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಏಳುವರೆ ಕೋಟಿ ವೆಚ್ಚ ಪಟ್ಟಣದಲ್ಲಿ ಒಳಚರಂಡಿ ಯೋಜನೆ, ಪಟ್ಟಣದ ಬಿ.ಎಚ್.ರಸ್ತೆ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವುದು, ಓದಿರಾಯನ ಹಳ್ಳ ಇತ್ಯಾದಿ ಅನೇಕ ಅಭಿವೃದ್ಧಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಸಕ ಜೆ.ಎಚ್. ಶ್ರೀನಿವಾಸ್ ಸಹಕಾರದಿಂದ ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳಿಗೆ ಶಾಶ್ವತ ವಾದ ನಿಲ್ದಾಣದ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ ಅವರು ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದು ಸಂತೋಷ ತಂದಿದೆ ಎಂದು ಹೇಳಿದರು.
ಮಾಜಿ ಪುರಸಭಾಧ್ಯಕ್ಷ, ಸಹಕಾರ ಪ್ರಶಸ್ತಿ ಪುರಸ್ಕೃತ ಎಂ.ನರೇಂದ್ರ ಮಾತನಾಡಿ ಕನ್ನಡ ರಾಜ್ಯೋತ್ಸವ ಮನೆ ಮನೆಗಳಲ್ಲಿ ಕನ್ನಡ ರಾಜ್ಯೋತ್ಸವ ನಡೆಯಬೇಕು. ಕನ್ನಡ ಸೇವೆ ಮಾಡಬೇಕು, ಕನ್ನಡದಲ್ಲಿ ವ್ಯವಹರಿಸಿದರೆ ಲಾಭ ವೃದ್ಧಿಸುತ್ತದೆ. ಸಂಜೀವಿನಿ ಗುಣ ಕನ್ನಡದಲ್ಲಿದೆ. ಕಾರ್ಯಕ್ರಮಗಳಿಗೆ ನಿಮ್ಮಕುಟುಂಬದವರನ್ನು ಕರೆತನ್ನಿ. ಮಕ್ಕಳಿಗೆ ನಮ್ಮತನದ ಅರಿವು ಮೂಡಿಸಬೇಕು. ಕುಟುಂಬಕ್ಕೆ ಕನ್ನಡ ಭಾಷೆ ಬಗ್ಗೆ ತಿಳಿಸಬೇಕು. ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಮಾತನಾಡಿ ನೀವು ಶ್ರಮಜೀವಿಗಳು, ನಿಮ್ಮ ಆರೋಗ್ಯ ಬಹಳ ಮುಖ್ಯ, ಎಲ್ಲ ಸಂಘ ಸಂಸ್ಥೆಗಳ ಸಹಕಾರದಿಂದ ಆರೋಗ್ಯ ಶಿಬಿರ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಚಿಕ್ಕಮಗಳೂರು ಕನ್ನಡ ಜಾನಪದ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎಸ್.ವಿಶಾಲಾಕ್ಷಮ್ಮ ಮಾತನಾಡಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗಿದೆ ಎಂದು ಹೇಳಿದರು.ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದು ಡಾ.ಭರತ್ ಅಂಚೆ ಹೇಳಿದರು.ಜೈ ಕರ್ನಾಟಕ ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಮಾಲೀಕರು ಮತ್ತ ಚಾಲಕರ ಸಂಘ ಅಧ್ಯಕ್ಷ ಟಿ.ಎನ್.ಸಿದ್ದೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪುರಸಭೆ ಸದಸ್ಯ ಟಿ.ದಾದಾಪೀರ್, ಅನಿಲ್ ಮೆನೆಜೆಸ್, ಪುರಸಭಾ ಮಾಜಿ ಅಧ್ಯಕ್ಷರು ಟಿ.ಎಸ್.ಧರ್ಮರಾಜ್, ಪೋಲೀಸ್ ಸಬ್ ಇನ್ಸ್ ಪೆಕ್ಟರ್ ನಾಗೇಂದ್ರ ನಾಯಕ್ ಮತ್ತಿತರರು ಮಾತನಾಡಿದರು.ಮಂಜುನಾಥ್ ಗೀತೆ ಹಾಡಿದರು. ಪುರಸಭೆ ಸದಸ್ಯ ಕುಮಾರಪ್ಪ, ಕನ್ನಡಶ್ರೀ ಬಿ.ಎಸ್.ಭಗವಾನ್, ಲೇಖಕ ತ.ಮ. ದೇವಾನಂದ್, ಜೈ ಕರ್ನಾಟಕ ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಮಾಲೀಕರು ಮತ್ತ ಚಾಲಕರ ಸಂಘ ಪದಾಧಿ ಕಾರಿಗಳು, ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಸಂಘದ ಮಾಜಿ ಅಧ್ಯಕ್ಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.28ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಜೈ ಕರ್ನಾಟಕ ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಮಾಲೀಕರು ಮತ್ತ ಚಾಲಕರ ಸಂಘದಿಂದ 8ನೇ ವರ್ಷದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಜೈ ಕರ್ನಾಟಕ ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಮಾಲೀಕರು ಮತ್ತ ಚಾಲಕರ ಸಂಘದ ಅಧ್ಯಕ್ಷ ಟಿ.ಎನ್.ಸಿದ್ದೇಶ್, ತಾಲೂಕು ಕಸಾಪ ಅಧ್ಯಕ್ಷ ರವಿದಳವಾಯಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂ.ನರೇಂದ್ರ, ಪುರಸಭೆ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.