ಮಾರಮ್ಮದೇವಿ ಜಾತ್ರೆಯ ಪೂರ್ವ ಸಿದ್ದತೆ ಪರಿಶೀಲಿಸಿದ ಶಾಸಕ ಗೋಪಾಲಕೃಷ್ಣ

| Published : Aug 30 2024, 01:10 AM IST

ಮಾರಮ್ಮದೇವಿ ಜಾತ್ರೆಯ ಪೂರ್ವ ಸಿದ್ದತೆ ಪರಿಶೀಲಿಸಿದ ಶಾಸಕ ಗೋಪಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ತಳಕು ಹೋಬಳಿ ಗೌರಸಮುದ್ರ ಶ್ರೀಮಾರಮ್ಮ ದೇವಿ ಜಾತ್ರೆ ಪೂರ್ವಸಿದ್ದತೆಗಳನ್ನು ಶಾಸಕ ಎನ್.ವೈ. ಗೋಪಾಲಕೃಷ್ಣ ಗುರುವಾರ ತುಮಲು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ತಾಲೂಕಿನ ತಳಕು ಹೋಬಳಿ ಗೌರಸಮುದ್ರ ಶ್ರೀಮಾರಮ್ಮ ದೇವಿ ಜಾತ್ರೆ ಪೂರ್ವಸಿದ್ದತೆಗಳನ್ನು ಶಾಸಕ ಎನ್.ವೈ. ಗೋಪಾಲಕೃಷ್ಣ ಗುರುವಾರ ತುಮಲು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಶನಿವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಹೆಚ್ಚುವರಿಯಾಗಿ ಬೋರ್ ಕೊರೆಸಲಾಗಿದೆ. ಜಾತ್ರೆಗೆ ಆಗಮಿಸುವ ಭಕ್ತರಿಗೆ ತ್ವರಿತವಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಂಡ ತಾಲೂಕು ಆಡಳಿತ ವ್ಯವಸ್ಥೆಗೆ ಅಭಿನಂದಿಸಿದರು.

ಜಾತ್ರೆ ಆರಂಭವಾಗಲು ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿದ್ದು, ಉಳಿದ ಎಲ್ಲಾ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಪೂರೈಸುವಂತೆ ಸೂಚನೆ ನೀಡಿದರು. ಯಾವುದೇ ಸಮಸ್ಯೆ ಇದ್ದಲ್ಲಿ ಕೂಡಲೇ ಗಮನಕ್ಕೆ ತರುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಣ್ಣಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಪೂರ್ವಸಿದ್ದತೆಯನ್ನು ಪರಿಶೀಲಿಸಲು ಆಗಮಿಸಿದ ಶಾಸಕನ್ನು ಪಂಚಾಯಿತಿಯಿಂದ ಗೌರವಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಶಶಿಕುಮಾರ್, ಈರಣ್ಣ, ಎಂ.ಚಂದ್ರಣ್ಣ, ತಿಪ್ಪೇಸ್ವಾಮಿ, ಬೊಮ್ಮಣ್ಣ, ನಾಗರಾಜ, ಪಿಡಿಒ ಹನುಮಂತರಾಜು, ಕಾಂಗ್ರೆಸ್ ಪಕ್ಷದ ಮುಖಂಡ ಆರ್. ನಾಗೇಶ್ ಮುಂತಾದವರು ಉಪಸ್ಥಿತರಿದ್ದರು.