ಸಾರಾಂಶ
ಅಪೌಷ್ಠಿಕತೆ ಹೋಗಲಾಡಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ವಾರದ ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಎನ್ ವೈ. ಗೋಪಾಲಕೃಷ್ಣ ಹೇಳಿದರು.
ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು
ಅಪೌಷ್ಠಿಕತೆ ಹೋಗಲಾಡಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ವಾರದ ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಎನ್ ವೈ. ಗೋಪಾಲಕೃಷ್ಣ ಹೇಳಿದರು.ತಾಲೂಕಿನ ರಾಂಪುರ ಗ್ರಾಮದ ಗಡ್ಡೆ ವೀರಭದ್ರಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆ ವಿತರಿಸಿ ಮಾತನಾಡಿದರು.
ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆ ಮಾಡಿ, ಪೌಷ್ಠಿಕತೆ ವೃದ್ಧಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ದಿಟ್ಟ ನಿರ್ಧಾರ ಮಾಡಿರುವುದು ಶ್ಲಾಘನೀಯ. ಇದರಿಂದ ಮಕ್ಕಳು ಸದೃಢವಂತಾರಾಗಲು ನೆರವಾಗಿದೆ. ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಿತ್ಯವೂ ಮೊಟ್ಟೆ ವಿತರಿಸಲಾಗುವುದು ಎಂದು ತಿಳಿಸಿದರು.ಈ ಯೋಜನೆಗೆ ಎಲ್ಲಿಯೂ ಲೋಪಗಳಾಗದಂತೆ ಯಶಸ್ವಿಗೊಳಿಸಬೇಕು. ಮೊಟ್ಟೆ ವಿತರಣೆಯಿಂದ ಮಕ್ಕಳು ಶಿಕ್ಷಣ ಕುರಿತು ಉತ್ಸಾಹವಂತರಾಗಿ ಶಾಲೆಗೆ ಆಗಮಿಸುತ್ತಾರೆ ಎಂದರು. ಮಕ್ಕಳು ಯೋಜನೆಯ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ಸದೃಢವಂತರಾಗಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಜಗದೀಶ್, ತಾಪಂ ಇ.ಒ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪಾತಲಿಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಮುಖ್ಯ ಶಿಕ್ಷಕ ಹನುಮಂತಪ್ಪ, ಎಸ್ ಡಿಎಂಸಿ ಅಧ್ಯಕ್ಷ ಹೊನ್ನೂರಪ್ಪ, ತಾಪಂ ವ್ಯವಸ್ಥಾಪಕ ನಂದೀಶ್ ಇದ್ದರು.