ಸಾರಾಂಶ
ಸಮೀಪದ ಮಸಗೋಡು ಗ್ರಾಮದಲ್ಲಿ ನೂತನ ಸ್ತ್ರೀಶಕ್ತಿ ಭವನ ನಿರ್ಮಿಸಲು ಶಾಸಕ ಡಾ. ಮಂತರ್‌ಗೌಡ ಭೂಮಿ ಪೂಜೆ ನೆರವೇರಿಸಿದರು. 
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಮೀಪದ ಮಸಗೋಡು ಗ್ರಾಮದಲ್ಲಿ ನೂತನ ಸ್ತ್ರೀ ಶಕ್ತಿ ಭವನ ನಿರ್ಮಿಸಲು ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.ನಂತರ ಅವರು ಮಾತನಾಡಿ, ಪ್ರತಿ ಗ್ರಾಮಗಳಲ್ಲಿಯೂ ಚಿಕ್ಕಪುಟ್ಟ ಸಮುದಾಯ ಭವನಗಳಿದ್ದರೆ, ಎಲ್ಲ ಕಾರ್ಯಕ್ರಮಗಳಿಗೂ ಅನುಕೂಲವಾಗುವುದು. ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಿಸಲು ಮುಂದಾಗಲಾಗಿದೆ. ಕಾಮಗಾರಿ ನಡೆಯುವ ಸಂದರ್ಭ ಎಲ್ಲ ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಸುವಂತೆ ನೋಡಿಕೊಳ್ಳಬೇಕು. ಆರಂಭಿಕ ಹಂತದಲ್ಲಿ 5 ಲಕ್ಷ ರು. ಅನುದಾನ ನೀಡಲಾಗುವುದು, ನಂತರ ಹಂತ ಹಂತವಾಗಿ ಅನುದಾನ ನೀಡಲಾಗುವುದು ಎಂದು ಶಾಸಕರು ಹೇಳಿದರು. ಕಾಮಗಾರಿ ಸಂದರ್ಭ ಯಾವುದೇ ರಾಜಕೀಯ ಬೇಡ. ಈಗಿನ ಹಣದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲು ಗಟ್ಟಿಮುಟ್ಟಾದ ತಳಪಾಯ ಹಾಕಿಸಿದಲ್ಲಿ, ಮುಂದಿನ ದಿನಗಳಲ್ಲಿ ಉಳಿಕೆ ಹಣವನ್ನು ನೀಡಲಾಗುವುದು ಎಂದು ತಿಳಿಸಿದರು.ಮಸಗೋಡು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಂಗೀರ ಮನೆ ಸತೀಶ್ ಮಾತನಾಡಿ, ಗ್ರಾಮದಲ್ಲಿ ಸ್ತ್ರೀ ಶಕ್ತಿ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಗ್ರಾಮದಲ್ಲಿನ ದೇವಾಲಯ ಅಭಿವೃದ್ಧಿಗೆ ಹಾಗೂ ಸ್ಮಶಾನಕ್ಕೆ ತೆರಳುವ ರಸ್ತೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.ವೇದಿಕೆಯಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಾ ದಿನೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಹಾಗೂ ಗ್ರಾಮದ ಪ್ರಮುಖರು ಇದ್ದರು.;Resize=(128,128))
;Resize=(128,128))