ವೇಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ಓಸಾಟ್ ಸಂಸ್ಥೆಯು ಐದು ತರಗತಿ ಕೊಠಡಿಗಳು, ಬಾಲಕಿಯರಿಗೆ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಯನ್ನು 1.25 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿ ಕೊಡುತ್ತಿದ್ದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಬೆಳ್ತಂಗಡಿ: ವೇಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ಓಸಾಟ್ ಸಂಸ್ಥೆಯು ಐದು ತರಗತಿ ಕೊಠಡಿಗಳು, ಬಾಲಕಿಯರಿಗೆ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಯನ್ನು 1.25 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿ ಕೊಡುತ್ತಿದ್ದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ದಾನಿಗಳ ಸಹಕಾರದಿಂದ ನಿರ್ಮಿಸಲಾದ 10 ಲಕ್ಷ ರು. ವೆಚ್ಚದ ನೂತನ ಸಭಾಂಗಣವನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಈ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ಕೆ.ಪಿ.ಎಸ್. ಸಂಸ್ಥೆಯಾಗಿ ಪರಿವರ್ತಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಶೇ. ಫಲಿತಾಂಶ ಬಂದಿದ್ದು ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಗೌರವಿಸಿ ಅಭಿನಂದಿಸಲಾಯಿತು.

ಎಸ್ ಡಿಎಂಸಿ ಅಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ , ನೂತನ ಸಭಾಂಗಣಕ್ಕೆ ಆರ್ಥಿಕ ನೆರವು ನೀಡಿದ ರೋಟರಿ ಕ್ಲಬ್ ಸಿದ್ದಕಟ್ಟೆ ಅಧ್ಯಕ್ಷ ದುರ್ಗಾ ದಾಸ್ ಶೆಟ್ಟಿ, ಹಲವು ವರ್ಷಗಳಿಂದ ಕ್ರೀಡಾಕೂಟಕ್ಕೆ ಸಹಕರಿಸುತ್ತಿರುವ ಮೋಹನ್ ದಾಸ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಪಡೆದ ಸುಪ್ರಿಯಾ ಹಾಗೂ 600ಕ್ಕಿಂತ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳನ್ನು, ರಾಜ್ಯಮಟ್ಟದಲ್ಲಿ ಸಾಧನೆಗೈದ 10 ವಿದ್ಯಾರ್ಥಿಗಳನ್ನು, ಎನ್ ಎಂಎಸ್ ಎಸ್ ಪರೀಕ್ಷೆ ಉತ್ತೀರ್ಣರಾದ ಆರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಓಸಾಟ್ ಸಂಸ್ಥೆಯ ಅಧಿಕಾರಿಗಳಾದ ಬಾಲಕೃಷ್ಣ ರಾವ್ ಹಾಗೂ ಕಿಶೋರ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕ ಶಿವಶಂಕರ ಭಟ್, ತಾಪಂ ಮಾಜಿ ಸದಸ್ಯ ವಿಜಯ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ್ ಭಂಡಾರಿ, ಗ್ರಾಪಂ ಮಾಜಿ ಅಧ್ಯಕ್ಷ ನೇಮಯ್ಯ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.ಶಾಲಾ ವೈಸ್ ಪ್ರಿನ್ಸಿಪಾಲ್ ವೆಂಕಟೇಶ್ ಎಸ್.ತುಳುಪುಳೆ ಸ್ವಾಗತಿಸಿದರು. ಶಿಕ್ಷಕಿಯರಾದ ಜ್ಯೋತಿ ಜೂಲಿಯೆಟ್ ಡಿಸೋಜಾ ಮತ್ತು ಸುಶೀಲಾ ಜಿ ಕಾರ್ಯಕ್ರಮ ನಿರೂಪಿಸಿದರು. ನೆಲ್ಸನ್ ಹೆರಾಲ್ಡ್ ವಂದಿಸಿದರು.