ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ಸೂಚನೆ

| Published : Sep 04 2024, 01:45 AM IST

ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಂದುಕೊರತೆ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ತಾಪಂ ಇಒ ಅವರಿಗೆ ಸೂಚಸಿದರು. ಮಾಗಡಿಯಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಾಗಡಿ

ಕುಂದುಕೊರತೆ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ತಾಪಂ ಇಒ ಅವರಿಗೆ ಸೂಚಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಂದು ಕೊರತೆ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಿ ತಾಲೂಕು ಪಂಚಾಯಿತಿ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಯಾವ ಇಲಾಖೆಯ ಅಧಿಕಾರಿಗಳು ಗೈರಾಗಿದ್ದಾರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ತಾಲೂಕಿನಲ್ಲಿರುವ ಖಾಸಗಿ ಲ್ಯಾಬ್ ಗಳಲ್ಲಿ ರಕ್ತ ಪರೀಕ್ಷೆ ಸೇರಿದಂತೆ ತಾವು ಮಾಡುವ ಪರೀಕ್ಷೆಗಳಿಗೆ ದರಪಟ್ಟಿಯನ್ನು ಹಾಕುವ ಕೆಲಸ ಮಾಡಬೇಕು. ಹೆಚ್ಚುವರಿ ಯಾಗಿ ಸಾರ್ವಜನಿಕರಿಂದ ಹಣ ಪಡೆದರೆ ಅಂತಹವರ ವಿರುದ್ಧ ತಾಲೂಕು ಆರೋಗ್ಯ ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು. ರಾಜ್ಯದಲ್ಲೇ ಪ್ರಥಮ ಬಾರಿಗೆ ಮಾಗಡಿ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಕಂಪ್ಯೂಟರ್ ನಲ್ಲಿ ಬರುವ ಕೆಲಸ ಮಾಡಲಾಗುತ್ತಿದೆ. ಯಾವುದೇ ರೀತಿ ಅವ್ಯವಹಾರಕ್ಕೆ ಇನ್ನೂ ಮುಂದೆ ಆಸ್ಪದ ಇರುವುದಿಲ್ಲ ಎಂದ ಶಾಸಕರು ಸ್ಮಶಾನ ನಿರ್ಮಾಣ, ಏಕವ್ಯಕ್ತಿ ಸರ್ವೆ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ತಾಹಶೀಲ್ದಾರ್ ಶರತ್ ಕುಮಾರ್, ತಾಲೂಕು ಪಂಚಾಯಿತಿ ಇಒ ಜೈಪಾಲ್, ಕುಂದುಕೊರತೆ ಸದಸ್ಯರಾದ ನರಸಿಂಹಮೂರ್ತಿ, ಪೊಲೀಸ್ ಇನ್ಸ್ಪೆಕ್ಟರ್ ಗಿರಿರಾಜ್, ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಪ್ರಕಾಶ್ ಸೇರಿದಂತೆ ತಾಲೂಕು ಮಟ್ಟದ ದಲಿತ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.