ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಗೊಂಡಬಾಳ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಗೊಂಡಬಾಳ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಹಾಲವರ್ತಿ ಗ್ರಾಮದ ಸಮೀಪ ₹22 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು, ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.

ಬಳಿಕ ಕುಣಿಕೇರಿ ತಾಂಡಾ, ಕುಣಿಕೇರಿ, ಲಾಚನಕೇರಿ, ಕರ್ಕಿಹಳ್ಳಿ, ಹಿರೇಬಗನಾಳ, ಚಿಕ್ಕನಾಗನಾಳ ಹಾಗೂ ಅಲ್ಲಾನಗರ ಗ್ರಾಮಗಳಿಗೆ ಭೇಟಿ ನೀಡಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದುಕೊಂಡರು.

ಗ್ರಾಮಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿದ ಶಾಸಕರು, ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತು ಚರ್ಚಿಸಿದರು.

ಜಿಪಂ ಮಾಜಿ ಸದಸ್ಯ ಗೂಳಪ್ಪ ಹಲಿಗೇರಿ, ಭರಮಪ್ಪ ಹಟ್ಟಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಾಲಚಂದ್ರನ್ ಮುನಿರಾಬಾದ್, ತೋಟಪ್ಪ ಕಾಮನೂರು, ವಿರೂಪಣ್ಣ ಕುಣಿಕೇರಿ, ಬನ್ನೇಪಗೌಡ, ಹನುಮೇಶ ಹೊಸಳ್ಳಿ, ಹೇಮಣ್ಣ ದೇವರಮನಿ, ಆನಂದ ಕಿನ್ನಾಳ, ಜಗದೀಶ ಕರ್ಕಿಹಳ್ಳಿ, ಅಸ್ಮಾನ್ ಸಾಬ್, ಮುದಿಯಪ್ಪ ಆದೋನಿ, ಭರಮಪ್ಪ ಗೊರವರ್, ದೇವೇಂದ್ರಪ್ಪ ಮಜ್ಜಿಗಿ, ರವಿ ದೇವರಮನಿ, ಲಕ್ಷ್ಮಣ್ ನಾಯಕ್, ಕಾಳಪ್ಪ ತಾಂಡ, ಮಹೇಶ ಕುಣಿಕೇರಿ, ಮಂಜಪ್ಪ ಲಾಚನಕೇರಿ, ಮಲ್ಲು ಪೂಜಾರ್, ಹನುಮೇಶ ಹಾಲವರ್ತಿ ಉಪಸ್ಥಿತರಿದ್ದರು.