ಸಾರಾಂಶ
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವರ ಜೊತೆ ಚರ್ಚೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ಕ್ಷೇತ್ರದಲ್ಲಿ ಹದೆಗೆಟ್ಟಿರುವ ರಸ್ತೆಗಳ ಅಭಿವೃದ್ಧಿ ಕುರಿತು ಸುದೀರ್ಘ ಕಾಲ ಚರ್ಚೆ ಮಾಡಿದರು. ಸಚಿವರು ಕೂಡ ನನ್ನ ಮನವಿಗೆ ಸ್ಪಂದಿಸಿದ್ದು, ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಬಹುದಿನಗಳ ಬೇಡಿಕೆ ಆಗಿರುವ ಕೊಪ್ಪಳ-ಕಿನ್ನಾಳ ರಸ್ತೆ ಅಭಿವೃದ್ಧಿಗೆ ₹9.50 ಕೋಟಿ ಅನುದಾನ ಮಂಜೂರು ಆಗಿದ್ದು, ಟೆಂಡರ್ ಸಹ ಮುಗಿದಿದ್ದು, ನಾಳೆಯಿಂದಲೇ ಕಾಮಗಾರಿ ಪ್ರಾರಂಭ ಮಾಡುವಂತೆಯೂ ಮನವಿ ಮಾಡಿದ್ದಾರೆ.ಟಿ. ಜನಾರ್ದನಗೆ ನುಡಿನಮನ:
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹುಲಿಗಿ, ಹೊಸಳ್ಳಿ, ತಿಮ್ಮಪ್ಪನಮಟ್ಟಿ ತ್ಯಾಜ್ಯ ನಿರ್ವಹಣಾ ಘಟಕದ ಸಂಸ್ಥಾಪಕ ಅಧ್ಯಕ್ಷ ಜನಾರ್ದನ ಹುಲಿಗಿ ಅವರಿಗೆ ಬುಧವಾರ ಹುಲಗಿಯ ಅವರ ನಿವಾಸದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾವಪೂರ್ಣ ನುಡಿನಮನ ಸಲ್ಲಿಸಲಾಯಿತು.ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ, ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್, ವಾಣಿಜ್ಯೋದ್ಯಮಿ ವಿ.ಆರ್. ಪಾಟೀಲ್, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್, ಕಿರ್ಲೋಸ್ಕರ್ ವಿಪಿ ಪಿ. ನಾರಾಯಣ, ಪ್ರಮುಖರಾದ ವೆಂಕಟೇಶ ಕಂಪಸಾಗ, ಹನುಮಂತಪ್ಪ ಹ್ಯಾಟಿ, ಪಾಲಕ್ಷಪ್ಪ ಗುಂಗಾಡಿ, ಯಂಕಪ್ಪ ಹೊಸಳ್ಳಿ, ಈರಣ್ಣ ಈಳಿಗರ ಮೊದಲಾದವರು ಇದ್ದರು.