ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರೂಪಿಸಿರುವ ಪ್ರಚಾರ ರಥ ಪಟ್ಟಣದ ಮುಖ್ಯದ್ವಾರಕ್ಕೆ ಆಗಮಿಸಿದಾಗ ಶಾಸಕ ಎಚ್.ಟಿ. ಮಂಜು ಬರಮಾಡಿಕೊಂಡರು.ನಂತರ ಮಾತನಾಡಿದ ಶಾಸಕರು, 30 ವರ್ಷಗಳ ನಂತರ ಮತೊಮ್ಮೆ ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಕನ್ನಡ ನುಡಿ ಹಬ್ಬವನ್ನು ಜಿಲ್ಲೆಯ ಜನ ಸಂಭ್ರಮ ಮತ್ತು ಸಡಗರದಿಂದ ಆಚರಿಸಬೇಕು ಎಂದರು.
ಕನ್ನಡ ನುಡಿ ಜಾತ್ರೆಗೆ ಜಿಲ್ಲೆಯ ಜನರನ್ನು ಆಹ್ವಾನಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಪ್ರಚಾರ ರಥ ಯಾತ್ರೆ ನಡೆಸುತ್ತಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುವ ಮೂಲಕ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಾರಣೀಭೂತರಾಗಬೇಕು ಎಂದರು.ಅಚ್ಚ ಕನ್ನಡಿಗರಾದ ಮಂಡ್ಯ ಜನತೆ ಹೃದಯ ವೈಶಾಲ್ಯತೆಗೆ ಹೆಸರಾದವರು. ಶುದ್ಧ ಕನ್ನಡ ಮಾತನಾಡುವ ಸಕ್ಕರೆ ನಾಡಿನಲ್ಲಿ ನಡೆಯಲಿರುವ ಅಕ್ಷರ ಜಾತ್ರೆಗೆ ಎಲ್ಲಾ ಸಾರ್ವಜನಿಕರು ಸ್ವಿಇಚ್ಚೆಯಿಂದ ಆಗಮಿಸಿ ಮೂರು ದಿನಗಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ವಸ್ತು ಪ್ರದರ್ಶನ ಮಳಿಗೆಗಳು ವೈವಿಧ್ಯಮಯವಾಗಿರಲಿ: ಮಧು ಜಿ.ಮಾದೇಗೌಡಮಂಡ್ಯ:
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯುವ ವಸ್ತು ಪ್ರದರ್ಶನ ಮಳಿಗೆಗಳು ವೈವಿಧ್ಯಮಯವಾಗಿರಲಿ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತಿರಲಿ ಎಂದು ಶಾಸಕ ಮಧು ಜಿ.ಮಾದೇಗೌಡ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಸ್ತು ಪ್ರದರ್ಶನ ಸಮಿತಿ ಸಭೆ ನಡೆಸಿ ಮಾತನಾಡಿ, ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇಲಾಖೆಗಳಿಂದ ಪ್ರತಿನಿಸುವ ವಸ್ತು ಪ್ರದರ್ಶನ ಮಳಿಗೆಗಳು ಪರಿಣಾಮಕಾರಿಯಾಗಿ ವಿನ್ಯಾಸಗೊಳಿಸಿ ಒಂದೇ ರೀತಿಯ ಬದಲು ವೈವಿಧ್ಯಮಯವಾಗಿರಲಿ ಎಂದು ಸಲಹೆ ನೀಡಿದರು.
ಪ್ರತಿಯೊಂದು ಇಲಾಖೆ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಬೇಕು. ಮಳಿಗೆ ವಿನೂತನ, ಪರಿಣಾಮಕಾರಿಯಾಗಿ ಸ್ಥಾಪಿಸುವ ಸಂಬಂಧ ಚರ್ಚಿಸಿ, ಸಮ್ಮೇಳನದ ಯಶಸ್ವಿಗೆ ಸಹಕರಿಸಿ ಎಂದರು.ಸಭೆಯಲ್ಲಿ ಕಸಾಪ ಜಿಲ್ಲಾ ಸಂಚಾಲಕಿ ಡಾ.ಮೀರಾಶಿವಲಿಂಗಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಪ್ರವಾಸೋದ್ಯಮ ಇಲಾಖೆ ರಾಘವೇಂದ್ರ, ಚೆಸ್ಕಾಂ ನ ಕಾರ್ಯನಿರ್ವಾಹಕ ಅಭಿಯಂತರ ಎಸ್. ಅನಿತಾ, ಆರೋಗ್ಯ ಇಲಾಖೆಯ ಕುಷ್ಠರೋಗ ನಿರ್ಮೂಲನಾಕಾರಿ ಡಾ. ಸೋಮಶೇಖರ್, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಸುರೇಶ್, ಸಮಾಜ ಕಲ್ಯಾಣ ಇಲಾಖೆ ಡಾ. ಸಿದ್ದಲಿಂಗೇಶ್, ಹುಸ್ಕೂರು ಕೃಷ್ಣೆಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.